ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ , ಈ ಬಾರಿ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮೊದಲ ಆದ್ಯತೆ ಇರಲಿದೆ ಎಂದಿದ್ದಾರೆ.
ವರ್ಗಾವಣಾ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಇದೇ ತಿಂಗಳ 17ರಿಂದ ಪ್ರಕ್ರಿಯೆ ಪ್ರಾರಂಭವಾಗಲಿದೆ. ಶಿಕ್ಷಕಮಿತ್ರ ಮೊಬೈಲ್ ಆಪ್ ಮೂಲಕ ವರ್ಗಾವಣಾ ಪ್ರಕ್ರಿಯೆ ನಿರ್ವಹಣೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಶಿಕ್ಷಕ,ಶಿಕ್ಷಣ ಸ್ನೇಹಿಯಾದ ವರ್ಗಾವಣಾ ಕಾಯಿದೆಗೆ ಉಭಯ ಸದನಗಳ ಅನುಮೋದನೆಯನ್ನು ಪಡೆದಿದ್ದೆವು. ಇಂದು ಈ ಕಾಯಿದೆಯನ್ನು ಆಧರಿಸಿದ ವರ್ಗಾವಣೆಗೆ ಚಾಲನೆ ನೀಡಿದ್ದೇವೆ. ಇದು ದೀಪಾವಳಿಗೆ ಸರ್ಕಾರ ನಮ್ಮ ಶಿಕ್ಷಕ ಸಮುದಾಯಕ್ಕೆ ನೀಡುತ್ತಿರುವ ಕೊಡುಗೆ. ಶಿಕ್ಷಕರಿಗೆ ಇದು ಉಪಯೋಗವಾಗಲಿ, ನಮ್ಮ ವಿದ್ಯಾರ್ಥಿಗಳ ಒಳಿತನ್ನು ಕಾಯಲು ಇದು ಪ್ರೇರಕವಾಗಲಿ ಎಂದು ಸಚಿವರು ಹೇಳಿದ್ದಾರೆ.
ಈಗಾಗಲೇ ಅಧಿಸೂಚನೆ ಪ್ರಕಟವಾಗಿದ್ದು ಇದೇ ತಿಂಗಳ 17ರಿಂದ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂತಿಮ ಕೌನ್ಸೆಲಿಂಗ್ ಅರ್ಹತಾ ಪಟ್ಟಿ ಡಿಸೆಂಬರ್ 14ರಂದು ಪ್ರಕಟವಾಗಲಿದೆ. ಈ ಬಗ್ಗೆ ಸರ್ಕಾರ ಹೊರಡಿಸಿರುವ ಅಧಿಕೃತ ಜ್ಞಾಪನದ ಪೂರ್ಣ ಪಾಠ ಇಲ್ಲಿದೆ.
Photo by Kimberly Farmer on Unsplash