ದೇಶಾದ್ಯಂತ ಎರಡನೇ ಹಂತದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಮಾರ್ಚ್ 1 ರಿಂದ ಆರಂಭವಾಗುವ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ ಮಧು ಮೇಹ, ರಕ್ತದ ಒತ್ತಡ ಮುಂತಾದ ತೊಂದರೆಗಳಿರುವ (comorbidities) 45 ವರ್ಷ ಮೀರಿದ ನಾಗರಿಕರಿಗೆ ಲಸಿಕೆ ನೀಡಲಾಗುವುದು.
ಈ ಬಾರಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ನೀಡಲಾಗವುದು. ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಉಚಿತ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಪಡೆದರೆ ಅದಕ್ಕೆ ಶುಲ್ಕ ತೆರಬೇಕಾಗುತ್ತದೆ. ಈ ಶುಲ್ಕ ಎಷ್ಟು ಎಂಬುದನ್ನು ಇನ್ನು ಎರಡು ಮೂರ ದಿನದಲ್ಲಿ ಆರೋಗ್ಯ ಸಚಿವಾಲಯ ನಿರ್ಧರಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಸಚಿವ ಪ್ರಕಾಶ್ ಜಾವೇಡೇಕರ್ ತಿಳಿಸಿದರು.