ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಯಿಂದ 15 ದಿನಗಳ ಕಾಲ ಸರಕಾರಿ-ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಹುಬ್ಬಳ್ಳಿಯಲ್ಲಿ ಸೂಚಿಸಿದ್ದಾರೆ.
ಸರಕಾರ ಯಾವುದೇ ಕಾರಣಕ್ಕೂ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿರುವ ಅವರು, ಹುಬ್ಬಳ್ಳಿಯಲ್ಲಿಂದು ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಯಾರೋ ಕಿಡಿಗೇಡಿಗಳು ನಕಲಿ ಸುತ್ತೋಲೆಯನ್ನು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಅದು ವೈರಲ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತೀವ್ರ ಗೊಂದಲವಾಗಿದೆ. ಅದೂ ಸರಕಾರದ ಹೆಸರಿನಲ್ಲಿ ನಕಲಿ ಸುತ್ತೋಲೆ ಸೃಷ್ಟಿಸುವುದು ದೊಡ್ಡ ಅಪರಾಧ. ಹೀಗಾಗಿ ಸೈಬರ್ ಪೊಲೀಸರಿಗೆ ತಕ್ಷಣ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಸೂಚಿಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದ ಜತೆ ಯಾರೂ ಚೆಲ್ಲಾಟ ಆಡಬಾರದು. ಮೊದಲೇ ಕೋವಿಡ್ ಕಾರಣಕ್ಕೆ ಎಲ್ಲರಿಗೂ ಆತಂಕ ಇದೆ. ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದ್ದರೂ ಕೆಲವರು ಇಂಥ ಕೃತ್ಯ ಎಸಗಿದ್ದಾರೆ. ಅಂಥವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಉಪ ಮುಖ್ಯಮಂತ್ರಿ ಎಚ್ಚರಿಸಿದರು
ಬೇಸಿಗೆ ರಜೆ ಘೋಷಣೆ ಸುಳ್ಳು- ಸುರೇಶ್ ಕುಮಾರ್
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೂ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. ಖಾಸಗಿ ಶಾಲೆಗಳು ಆನ್ ಲೈನ್ ಮೂಲಕ ಕಲಿಕೆಗೆ ಮುಂದಾಗಿವೆ. ಒಂದರಿಂದ ಐದರ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ ನಲಿಯೋಣ ಕಾರ್ಯಕ್ರಮ ಬಿತ್ತರ ಮಾಡಲಾಗುತ್ತಿದೆ. ದೂರದರ್ಶನದಲ್ಲಿ ಸಂವೇದಾ ಕಾರ್ಯಕ್ರಮ ಪ್ರಸಾರಗೊಂಡಿದೆ. ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ತಮ್ಮದೇ ಸ್ಥಳೀಯ ಸಂಪನ್ಮೂಲಗಳ ನೆರವಿನಲ್ಲಿ ಪರಾಮರ್ಶೆ ಮಾಡುತ್ತಿದ್ದಾರೆ. ಇದು ರಾಜ್ಯಾದ್ಯಂತ ಜಾರಿಯಲ್ಲಿದ್ದು, ಈ ಹಂತದಲ್ಲಿ ಬೇಸಿಗೆ ರಜೆಯನ್ನು ಘೋಷಿಸುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
I want Holiday’s because nange madiruvanthaha pata yavu arthavagilla soooo wee.. Don’t need. Exams we want classes or holiday s