19.9 C
Karnataka
Sunday, September 22, 2024

    ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ

    Must read

    ಮರಳಿ ಕಾಲೇಜಿಗೆʼ ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ಸರಕಾರ ಉದ್ದೇಶಿಸಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ಬೆಂಗಳೂರಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳ ವಿತರಣಾ ಕಾರ್ಯಕ್ರಮದ ನಂತರ ಮಾಧ್ಯಮಗಳ ಜತೆ ಮಾತನಾಡಿದರು ಅವರು.

    3ನೇ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿಯನ್ನು ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿ ನೀಡಿದೆ. ಮೊದಲು ಕಾಲೇಜುಗಳನ್ನು ತೆರೆಯಿರಿ ಎಂದು ವರದಿ ಶಿಫಾರಸು ಮಾಡಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದರು.

    ಕೇಂದ್ರ ಸರಕಾರ ನೀಡುವ ಮಾರ್ಗಸೂಚಿಗೆ ಸರಕಾರ ಕಾಯುತ್ತಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡುವ ಕೆಲಸ ಸಾಗಿದೆ. ಅದರಲ್ಲೂ ವಿದ್ಯಾರ್ಥಿಗಳನ್ನು ಆದ್ಯತಾ ಗುಂಪಿಗೆ ಸೇರಿಸಿ ವ್ಯಾಕ್ಸಿನ್‌ ನೀಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಲಸಿಕೆ ಮಾತ್ರ ಪರಿಹಾರ:

    ಕೋವಿಡ್‌ ಡೆಲ್ಟಾ ಪ್ಲಸ್‌ ಮಾರಿ ರಾಜ್ಯಕ್ಕೆ ಕಾಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದೆ. ಲಸಿಕೆ ಪಡೆದಿದ್ದರೆ ಯಾವುದೇ ರೂಪಾಂತರಿ ವೈರಸ್‌ ಬಂದರೂ ತೊಂದರೆ ಆಗುವುದಿಲ್ಲ. ಎಲ್ಲರೂ ಈಗ ಲಸಿಕೆ ಪಡೆಯಬೇಕು. ಅದೊಂದೇ ಪರಿಹಾರ ಎಂದು ಡಿಸಿಎಂ ಹೇಳಿದರು

    spot_img

    More articles

    1 COMMENT

    LEAVE A REPLY

    Please enter your comment!
    Please enter your name here

    Latest article

    error: Content is protected !!