21.2 C
Karnataka
Sunday, September 22, 2024

    ಜೋಗದಲ್ಲಿ ವರ್ಷಪೂರ್ತಿ ಜಲಧಾರೆ; ಲಿಂಗನಮಕ್ಕಿಯಿಂದ 200 ಕ್ಯೂಸೆಕ್ಸ್ ನೀರು

    Must read

    ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ರೂ.185 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲು ಟೆಂಡರ್ ಅಂತಿಮವಾಗಿದ್ದು, ಅತೀ ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ತಿಳಿಸಿದ್ದಾರೆ.

    ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಿಂದ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

    ಜೋಗಕ್ಕೆ ಜಲಮಾರ್ಗ

    ಕೇರಳ ಹಾಗೂ ಗೋವಾ ರಾಜ್ಯಗಳಿಂದ ಜೋಗ ಜಲಪಾತಕ್ಕೆ 35 ಕಿ.ಮೀ. ಉದ್ದದ ಜಲಮಾರ್ಗದಲ್ಲಿ ಪ್ರವಾಸಿಗರು ಆಗಮಿಸಲು ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದೆ.

    ಸರ್ಕಾರಿ ರಜಾ ದಿನಗಳಂದು ಲಿಂಗನಮಕ್ಕಿ ಜಲಾಶಯದಿಂದ ಪ್ರಥಮ ಹಂತವಾಗಿ 200 ಕ್ಯೂಸೆಕ್ಸ್ ನೀರನ್ನು ಹರಿಸಿ ಜೋಗದ ಸೊಬಗನ್ನು ಪ್ರವಾಸಿಗರಿಗೆ ಉಣಿಸಲಾಗುವುದು. ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣವನ್ನು 300 ಕ್ಯೂಸೆಕ್ಸ್ʼಗೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.
    ಸಾವಿರ ಪ್ರವಾಸಿಗರು ವಾಸ್ತವ್ಯ ಮಾಡಲು 2 ಹೋಟೆಲ್ʼಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು ಸಚಿವರು.

    ರಾಜ್ಯದ ಪ್ರತಿಷ್ಠಿತ ಯೋಜನೆಯಾಗಿರುವ ಹೆಲಿ ಟೂರಿಸಂ ಸರ್ಕೀಟ್ʼಗೆ ಜೋಗ ಜಲಪಾತವನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟಾರೆ ವರ್ಷದ 365 ದಿನಗಳು ಜೋಗದ ಸೊಬಗನ್ನು ರಾಜ್ಯ, ಹೊರ ರಾಜ್ಯಗಳು ಹಾಗೂ ದೇಶ ವಿದೇಶಗಳ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದು ಎಂದು ಅವರು ಹೇಳಿದರು.

    ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ಹಾಗೂ ವಸತಿ ವಿಹಾರಧಾಮ ಕಚೇರಿಯಲ್ಲಿ ಸಚಿವ ಯೋಗೇಶ್ವರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಕಾರ್ಯದರ್ಶಿ ಪೊನ್ನುರಾಜ್, ಪ್ರವಾಸೋದ್ಯಮ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ಜೆ.ಎಲ್.ಆರ್. ಹಾಗೂ ಕೆ.ಎಸ್.ಟಿ.ಡಿ.ಸಿ. ಎಂ.ಡಿಗಳಾದ ಕುಮಾರ್ ಪುಷ್ಕರ್ ಹಾಗೂ ವಿಜಯ ಶರ್ಮ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ರೂಪೇಶ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!