19.9 C
Karnataka
Sunday, September 22, 2024

    ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ

    Must read

    ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

    ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ GST ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು.

    ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ ಹತ್ತು ವರ್ಷಗಳ ಕಾಲ ಚರ್ಚೆಯಾಗಿದೆ. ಇಷ್ಟು ವರ್ಷಗಳ ಸುದೀರ್ಘ ಚರ್ಚೆಯ ನಂತರ ಜಿಎಸ್ಟಿ ಜಾರಿಯಾಗಿದೆ. ಒಂದು ರಾಷ್ಟ್ರ ಒಂದು ತೆರಿಗೆ ಪರಿಕಲ್ಪನೆಯ ಜತೆ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಹಲವಾರು ವೈರುಧ್ಯ ಮತ್ತು ವೈವಿಧ್ಯತೆ ರಾಜ್ಯಗಳನ್ನು ಒಗ್ಗೂಡಿಸಿಕೊಂಡು ಹೋಗೋದು ಬಹುದೊಡ್ಡ ಕೆಲಸ. ಈ ದೊಡ್ಡ ಕೆಲಸದ ಹಿಂದಿರುವ ಎಂಜಿನ್ ಎಂದರೆ ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಬಣ್ಣಿಸಿದರು.

    ದೇಶದಲ್ಲಿ GST ಜಾರಿಯಾದಾಗ ಹಳೇ ಪದ್ಧತಿಯಿಂದ ಹೊಸ ಪದ್ಧತಿಗೆ ಹೊಸ ಪದ್ಧತಿಗೆ ತಮ್ಮನ್ನು ತಾವು ಪರಿವರ್ತನೆ ಗೊಳಿಸಿಕೊಂಡವರು ಎಂದರೆ ತೆರಿಗೆ ಸಲಹೆಗಾರರು. ಅವರು ಹೊಸ ತೆರಿಗೆ ಪದ್ಧತಿಯನ್ನು ಅನುಷ್ಠಾನಕ್ಕೆ ತಂದರುಮ. ಜನರಲ್ಲಿ ಗೊಂದಲ ಸೃಷ್ಟಿಯಾಗದಂತೆ ಮುತುವರ್ಜಿ ವಹಿಸಿದರು. ಈ ಕಾರಣದಿಂದಾಗಿ ದೇಶದಲ್ಲಿ ಇಂದು ಜಿಎಸ್ಟಿ ತೆರಿಗೆ ವ್ಯವಸ್ಥೆ ನಾಲ್ಕು ವರ್ಷಗಳನ್ನು ಪೂರೈಸಿದೆ. ನಮ್ಮ ಮುಂದೆ ಮುಂದಿನ 40 ವರ್ಷಗಳಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಇನ್ನಷ್ಟು ಸರಳಿಕರಣ ಮಾಡಬೇಕಾದದ್ದು ಅಗತ್ಯವಾಗಿದೆ. ಒಟ್ಟಾರೆ ದೇಶಕಟ್ಟುವ ಕೆಲಸದಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ತೆರಿಗೆ ಸಲಹೆಗಾರರು ನಿರ್ವಹಿಸುವ ಪಾತ್ರ ಬಹುಮುಖ್ಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

    spot_img

    More articles

    1 COMMENT

    1. ಜಿ.ಎಸ್.ಟಿ. ನಾಲ್ಕನೇ ವಷ೯ದ ಯಶಸ್ವೀ ಸಂಭ್ರಮಾಚರಣೆಯಲ್ಲಿ ತೆರಿಗೆ ಸಲಹೆಗಾರರ ಪಾತ್ರವೂ ಬಹು ಪ್ರಮುಖ ಪಾತ್ರ ವಹಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.
      ಆದರೆ ಅವರ ಜವಾಬ್ದಾರಿ ಸಹ ಅಷ್ಟೇ ಪ್ರಧಾನವಾಗಿದೆ.
      ವ್ಯಾಪಾರಸ್ಥರಿಗೆ ಕಬ್ಬಿಣದ ಕಡಲೆ ಎಂಬಂತೆ ಗೋಚರಿಸಿದ್ದ ಕಾನೂನಿನ ಅಂಶಗಳನ್ನು ಸರಳವಾಗಿ ತಿಳಿಸಿ, ಅವರನ್ನು ಕಾಯ್ದೆಯ ವ್ಯಾಪ್ತಿಗೆ ಸೇರಿಸುವ ಕಾಯ೯ ಸರಳವಾಗಿಯೇನೂ ಇರಲಿಲ್ಲ. ಆದರೆ ಅದರಲ್ಲಿ ಅವರು ಯಶಸ್ವಿಯೂ ಆದರು.
      ಅಲ್ಲದೇ ಜಿ.ಎಸ್.ಟಿ. ಕಾಯ್ದೆ ಜಾರಿಗೊಳಿಸಿದ್ದರಿಂದ ಸಿಎ, ಬಿ.ಕಾಂ., ಬಿ.ಬಿ.ಎಂ. , ಬಿಸಿಎ., ಎಂ.ಸಿ.ಎ. ಪದವೀಧರರಿಗೂ ವಿಪುಲ ಉದ್ಯೋಗಾವಕಾಶಗಳೂ ಒದಗಿ ಬಂದವು.
      ಆದ್ದರಿಂದ ಕನಾ೯ಟಕದ ಪ್ರತಿನಿಧಿಗಳೂ ಹಾಗೂ ಗೃಹ ಸಚಿವರ ಹೇಳಿಕೆ ಅಕ್ಷರಶಃ ನಿಜ.

    LEAVE A REPLY

    Please enter your comment!
    Please enter your name here

    Latest article

    error: Content is protected !!