ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಖಟಿಮಾ ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷ ಆಯ್ಕೆ ಮಾಡಿದೆ. ಇಂದೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ.
ನಿನ್ನೆ ರಾಜೀನಾಮೆ ಸಲ್ಲಿಸಿದ ತೀರ್ಥ್ ಸಿಂಗ್ ರಾವತ್ ಕಳೆದ ಮಾರ್ಚ್ 10ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದರು. ವಿಧಾನಸಭೆ ಸದಸ್ಯರಲ್ಲದ ಅವರು ಆರು ತಿಂಗಳಲ್ಲಿ ವಿಧಾನಸಭೆಗೆ ಆಯ್ಕೆ ಯಾಗಬೇಕಿತ್ತು. ವಿಧಾನಸಭೆಗೆ ಸಧ್ಯದಲ್ಲೇ ಸಾರ್ವತ್ರಿಕ ಚುನಾವಣೆ ನಡೆಯಬೇಕಾಗಿರುವುದರಿಂದ ಚುನಾವಣೆ ಆಯೋಗ ಒಂದು ಸ್ಥಾನಕ್ಕೆ ಚುನಾವಣೆ ನಡೆಸುವ ಸಂಭವ ಇರಲಿಲ್ಲ. ಹೀಗಾಗಿ ಅಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಬಾರದೆಂದು ರಾವತ್ ನಿನ್ನೆ ರಾಜೀನಾಮೆ ನೀಡಿದ್ದರು. ಉತ್ತರಾಖಂಡದಲ್ಲಿ ವಿಧಾನಪರಿಷತ್ ಇಲ್ಲ.
ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪುಷ್ಕರ್ ಸಿಂಗ್ 1975 ರ ಸೆಪ್ಟೆಂಬರ್ 16ರಂದು ಜನಿಸಿದ್ದರು. ಮಾನವ ಸಂಪನ್ಮೂಲದಲ್ಲಿ ಸ್ನಾತಕೋತ್ತರ ಪದವಿ ಮತ್ತು ಎಲ್ ಎಲ್ ಬಿ ಪದವೀಧರರು.
ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಆಯ್ಕೆ ತುಂಬಾ ಸಮಂಜಸವಾಗಿದೆ. ಅವರಿಗೆ ಅಭಿನಂದನೆಗಳು