21.2 C
Karnataka
Sunday, September 22, 2024

    ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ scene of crime officer ಹುದ್ದೆ ಸೃಷ್ಟಿ

    Must read

    ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ.

    ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ.ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗುವುದು.

    ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಮೊದಲ ಹಂತದಲ್ಲಿ ಗಂಭೀರ ಸ್ವರೂಪದ ಅಪರಾಧಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ದಲ್ಲಿ ವಿಶೇಷ ತರಬೇತಿ ಪಡೆದ ಈ ತಂಡ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಮೊದಲು ಭೇಟಿ ನೀಡಲಿದೆ. ಆ ಸ್ಥಳದಲ್ಲಿನ ಎಲ್ಲ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡುವುದು, ಆನಂತರ ಸಾಕ್ಷಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ ಎಂದು ಬೊಮ್ಮಾಯಿ ನೂತನ ಹುದ್ದೆ ಬಗ್ಗೆ ತಿಳಿಸಿದರು.

    ಇದರಿಂದ ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣ ಸಾಧ್ಯ. ಈ ವ್ಯವಸ್ಥೆಯ ಪ್ರಮುಖವಾಗಿ ವಿದೇಶಗಳಲ್ಲಿ ಹೆಚ್ಚಾಗಿ ಇದೆ.ಪ್ರಥಮ ಹಂತದಲ್ಲಿ 206 ಜನ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಿದ್ದು, ನಾಳೆ ಈ ಸಂಬಂಧ ಅಧಿಕೃತವಾಗಿ ಸರ್ಕಾರಿ ಆದೇಶವನ್ನು ಮುಖ್ಯಮಂತ್ರಿಗಳು ಗೃಹ ಇಲಾಖೆಗೆ ಕೊಡ ಮಾಡಲಿದ್ದಾರೆ

    ಇದೇ ಸಂದರ್ಭದಲ್ಲಿ ಪೊಲೀಸರ ಆರೋಗ್ಯ ಕಾಪಾಡುವ ಆರೋಗ್ಯ ಭಾಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇರುವ ಕೈಪಿಡಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡಲು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಲಿದ್ದಾರೆ.ಅದೇ ರೀತಿ ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವಿದ್ಯಾನಿಧಿ – 2 ಯೋಜನೆಗೆ ಸಿಎಂ ಚಾಲನೆ ಕೊಡುತ್ತಾರೆ.ಇದಷ್ಟೇ ಅಲ್ಲದೆ ಅಗ್ನಿಶಾಮಕ ದಳ, ಗೃಹರಕ್ಷಕ ದಳ ಹಾಗೂ ಇತರ ಪೊಲೀಸ್ ಸೇವಾ ಪದಕಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರದಾನ ಮಾಡಲಿದ್ದಾರೆ.

    ಈ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಕೋರುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!