18.6 C
Karnataka
Friday, November 22, 2024

    ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಕ್ರಮ

    Must read

    ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿರುವುದು ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್‌ ನಿರಾಣಿ ಅವರು ಎಚ್ಚರಿಸಿದ್ದಾರೆ.

    ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ,ಶಾಸಕರು , ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

    ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ತಿಳಿಸಿದರು.

    ಕಳೆದ ಪೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್‌.ಎಸ್‌ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

    ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ನಿರಾಣಿ ಅವರು ಭರವಸೆ ಕೊಟ್ಟರು.

    ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಗಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಕೆ ಆರ್‌ ಎಸ್‌ ಅಣೆಕಟ್ಟಿನ ಸುತ್ತಮುತ್ತಲೂ ಪ್ರಾಯೋಗಿಕ ಸ್ಪೋಟ

    ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ ಕೆ ಆರ್‌ ಎಸ್‌ ಅಣೆಕಟ್ಟಿನ ಸುತ್ತಮುತ್ತಲೂ ಪ್ರಾಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀಮಾನಿಸಲಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಇದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದರು. ಈ ಹಿಂದೆಯೇ ಇದು ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

    ಸುಮಲತಾ ಅಂಬರೀಶ್ ಮನವಿ

    ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪ್ರದೇಶಗಳಲ್ಲಿ
    ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಇಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು

    ಗಣಿಗಾರಿಕೆ ನಿಷೇಧಕ್ಕೆ ನಾರಾಯಣ ಗೌಡ ಒಲವು

    ಕೆ ಆರ್ ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ, ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!