BENGALURU AUG 18
2021 ನೇ ಸಾಲಿನ ಬಿಎಂಟಿಸಿಯ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಖ್ಯಾತ ವಿಮರ್ಶಕ ಮಲ್ಲೇಪುರಂ ವೆಂಕಟೇಶ ಭಾಜನರಾಗಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆ ಈ ಆಯ್ಕೆಯನ್ನು ಮಾಡಿದೆ.
ಪ್ರಶಸ್ತಿಯು 7 ಲಕ್ಷದ 1ರು. ನಗದು, ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಂದೂವರೆ ಕೋಟಿ ರು. ದತ್ತಿನಿಧಿಯನ್ನು ಸ್ಥಾಪಿಸಿದೆ. ಅದರಿಂದ ಬರುವ ಬಡ್ಡಿ ಹಣದಲ್ಲಿ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ ನೀಡಲಾಗುತ್ತದೆ.
45 ವರ್ಷ ವಯಸ್ಸಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿಗೆ ಟಿ ಜಿ ಶ್ರೀನಿಧಿ, ಮಮತಾ ಅರಸೀಕೆರೆ, ಕ್ಯಾತ್ಯಾಯಿನಿ ಕುಂಜಿಬೆಟ್ಟು,ಬಸವರಾಜ ಭಜಂತ್ರಿ ಮತ್ತು ಜಗದೀಶ ಲಿಂಗನಾಯಕ ಅವರನ್ನು ಆಯ್ಕೆ ಮಾಡಲಾಗಿದೆ, ಈ ಪ್ರಶಸ್ತಿ ತಲಾ 25 ಸಾವಿರ ರೂ .ನಗದನ್ನು ಒಳಗೊಂಡಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.