- ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ತಂತ್ರಗಾರಿಕೆಗೆ ಸಿಕ್ಕ ಫಲ
- 38 ವರ್ಷಗಳ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯವರು ಮೇಯರ್
- ರಾಜಕೀಯ ಹಗ್ಗಜಗ್ಗಾಟದ ನಡುವೆಯೂ ಬಿಜೆಪಿಗೆ ಒಲಿದ ಮೇಯರ್ ಗಿರಿ
MYSORE AUG 25
ಮೈಸೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ ಮೇಯರ್ ಹುದ್ದೆಯನ್ನು ಪಡೆದಿದೆ. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರ ತಂತ್ರಗಾರಿಕೆ ಕೊನೆಗೂ ಫಲಿಸಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟದಲ್ಲಿ ಕೊನೆಗೂ ಮೇಯರ್ ಹುದ್ದೆ ಪಡೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಮೇಯರ್ ಪಟ್ಟ ಒಲಿಯಲಿದೆ ಎಂದು ಹೇಳುತ್ತಲೇ ಬಂದಿದ್ದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರ ಕಾರ್ಯತಂತ್ರ ಕೊನೆಗೂ ಯಶಸ್ವಿಯಾಗಿದೆ.
ಯಶಸ್ವಿಯಾದ ಸಚಿವ ಸೋಮಶೇಖರ್
ಕಳೆದ ವಾರ ಹಿಂದಷ್ಟೆ ಜೆಡಿಎಸ್ ಮುಖಂಡರಾದ ಹಾಗೂ ಶಾಸಕರಾದ ಸಾ.ರಾ. ಮಹೇಶ್ ಅವರ ಜತೆ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸಂಸದರು, ಶಾಸಕರು, ಬಿಜೆಪಿ ನಗರಾಧ್ಯಕ್ಷರು, ಮುಡಾ ಅಧ್ಯಕ್ಷರ ಜೊತೆಗೂಡಿ ಭೇಟಿಯಾಗಿ ಮೇಯರ್ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದನ್ನು ಸ್ಮರಿಸಬಹುದು. ಕೊನೆಗೂ ಮೈಸೂರಿನಲ್ಲಿ ಬಿಜೆಪಿಗೆ ಮೇಯರ್ ಹುದ್ದೆ ಲಭಿಸುವಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಯಶಸ್ವಿಯಾಗಿದ್ದಾರೆ.
ಮೈಸೂರು ಪಾಲಿಕೆಯ 38 ವರ್ಷದ ಇತಿಹಾದಲ್ಲೇ ಪ್ರಥಮ
160ಕ್ಕೂ ಹೆಚ್ಚು ವರ್ಷದ ಇತಿಹಾಸ ಹೊಂದಿರುವ ಮೈಸೂರು ಪೌರ ಸಂಸ್ಥೆಯು 1983ರಲ್ಲಿ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿತು. ಅಲ್ಲಿಂದ ಇಲ್ಲಿಯವರೆಗಿನ 38 ವರ್ಷದ ಅವಧಿಯಲ್ಲಿ ಬಿಜೆಪಿ ಒಂದು ಬಾರಿಯೂ ಮೇಯರ್ ಪಟ್ಟವನ್ನು ಅಲಂಕರಿಸಿರಲಿಲ್ಲ.