ಬ್ಯಾಂಕ್ ನಲ್ಲಿ ಅಧಿಕಾರಿ ಯಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಸಿಹಿ ಸುದ್ದಿ, ದೇಶದ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ-state bank of India – ಪ್ರೊಬೆಷನರಿ ಆಫೀಸರ್ಗಳ (ಪಿಒ)-Probationary officer -ನೇಮಕಕ್ಕೆ online ನಲ್ಲಿ ಮಾತ್ರ ಅರ್ಜಿ ಆಹ್ವಾನಿಸಿದೆ. ಒಟ್ಟು 2056ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದ್ದು, ಪರಿಶಿಷ್ಟ ಜಾತಿಯವರಿಗೆ 324, ಪರಿಶಿಷ್ಟ ಪಂಗಡದವರಿಗೆ 162, ಹಿಂದುಳಿದ ವರ್ಗದವರಿಗೆ ,560 ಸಾಮಾನ್ಯ ವರ್ಗದವರಿಗೆ ೮೧೦ ,ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ200 ಹುದ್ದೆಗಳು ಮೀಸಲಾಗಿವೆ.
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ.
ಪದವಿ ಅಂತಿಮ ವರ್ಷ/ಸೆಮಿಸ್ಟರ್ ನಲ್ಲಿರುವವರು ತಾತ್ಕಾಲಿಕವಾಗಿ ಅರ್ಜಿ ಸಲ್ಲಿಸಬಹುದು, ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೆ, ಅವರು 31 ನೇ ಡಿಸೆಂಬರ್2021 ಅಥವಾ ಅದಕ್ಕಿಂತ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರುವುದಕ್ಕೆ ಪುರಾವೆಗಳನ್ನು ಒದಗಿಸಬೇಕು.
ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತೀರ್ಣರಾದ ದಿನಾಂಕ 31 ಡಿಸೆಂಬರ್ 2021ಅಥವಾ ಅದಕ್ಕಿಂತ ಮುಂಚೆಯೇ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು.ಚಾರ್ಟರ್ಡ್ ಅಕೌಂಟೆಂಟ್ ಅಥವಾ ಕಾಸ್ಟ್ ಅಕೌಂಟೆಂಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್.
ಅರ್ಜಿ ಸಲ್ಲಿಕೆ ದಿನಾಂಕ: ಅಕ್ಟೋಬರ್ 5 ರಿಂದ ಅಕ್ಟೋಬರ್ 25ರವರೆಗೆ.
ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ – ನವೆಂಬರ್/ ಡಿಸೆಂಬರ್ 2021
ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ – ಡಿಸೆಂಬರ್ 2021
ಮೂರನೇ ಹಂತ: ಸಂದರ್ಶನ (ಅಥವಾ ಸಂದರ್ಶನ ಮತ್ತು ಗುಂಪು ಚರ್ಚೆ) ಫೆಬ್ರವರಿ 2022 ರ 2ನೇ ಅಥವಾ 3ನೇ ವಾರ.
ವಯೋಮಿತಿ:
01-04-2021 ರಂತೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. 01-04-2021 ಕ್ಕೆ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 1-04-2000 ಕ್ಕಿಂತ ಮುಂಚಿತವಾಗಿ ಮತ್ತು 2-04-1991ರ ನಂತರ ಜನಿಸಿರಬಾರದು.ಗರಿಷ್ಠ ವಯಸ್ಸಿನ ಮಿತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ 5 ವರ್ಷ, ಇತರೆ ಹಿಂದುಳಿದ ವರ್ಗಗಳಿಗೆ 3 ವರ್ಷ.
ಶುಲ್ಕಪಾವತಿ:
ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಶುಲ್ಕ: 750ರೂಗಳು. (ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.)
ನೇಮಕ ಹೇಗೆ?
ಮೊದಲ ಹಂತದಲ್ಲಿ ಪೂರ್ವ ಭಾವಿ ಪರೀಕ್ಷೆ (ಪ್ರಿಲಿಮ್ಸ್) ನಡೆಯಲಿದೆ. ಬೆಳಗಾವಿ, ಬೆಂಗಳೂರು, ಬೀದರ್,ದಾವಣಗೆರೆ, ದಾರವಾಡ ಕಲಬುರಗಿ, ಹಾಸನ,ಹುಬ್ಬಳ್ಳಿ, ಮಂಡ್ಯ,ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷೆ ಪರೀಕ್ಷಾ ಕೇಂದ್ರಗಳಿರಲಿವೆ.
ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿಯಾಗಿರುತ್ತದೆ ) ಇದರಲ್ಲಿ ಇಂಗ್ಲೀಷ್ ಲಾಂಗ್ವೇಜಗೆ 30, ನ್ಯೂಮರಿಕಲ್ ಎಬಿಲಿಟಿಯ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿಲ್ಲ.ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆ ಗಿಂತ10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ)
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರಿನಲ್ಲಿ ಮಾತ್ರ ನಡೆಯಲಿದ್ದು, ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿದೆ. ನಿಗದಿತ ದಿನದಂದು ಆನ್ ಲೈನ್ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯು ಮೂರು ಗಂಟೆ ಗಳ ಕಾಲ ನಡೆಯಲಿದ್ದು, 155 ಪ್ರಶ್ನೆಗಳನ್ನು 200 ಅಂಕಗಳಿಗೆ ಕೇಳಲಾಗುತ್ತದೆ.
I. Reasoning & Computer Aptitude 45 ಪ್ರಶ್ನೆ 60 ಅಂಕಗಳು 60 ನಿಮಿಷಗಳು,
II Data Analysis & Interpretation 35 ಪ್ರಶ್ನೆ 60 ಅಂಕಗಳು 45 ನಿಮಿಷಗಳು,
III III General/ Economy/ Banking Awareness 40ಪ್ರಶ್ನೆ 40 ಅಂಕಗಳು 35 ನಿಮಿಷಗಳು,
IV English Language 35ಪ್ರಶ್ನೆ 40ಅಂಕಗಳು 40 ನಿಮಿಷಗಳು,
ಹೀಗೆ ಒಟ್ಟಾರೆ 155 ಪ್ರಶ್ನೆಗಳಿಗೆ 200 ಅಂಕಗಳು ನಿಗದಿಯಾಗಿದ್ದು ಹಾಗೂ 180 ನಿಮಿಷದ ಸಮಯ ನಿಗದಿಪಡಿಸಲಾಗಿದೆ.ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.
( ಮೇನ್ಸ್) ಮುಗಿಯುತ್ತಿದ್ದಂತೆಯೇ ಡಿಸ್ಸ್ಕ್ರಿಟ್ಟಿವ್ ಟೆಸ್ಟ್ ಇಂಗ್ಲೀಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 50 ಅಂಕಗಳಿಗೆ ನಡೆಸಲಾಗುತ್ತದೆ. ಅವಧಿ 30ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರವನ್ನು ಬರೆಯಬೇಕು. ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ.
ಕೋವಿಡ್ ನಿಯಮಗಳಂತೆ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಹಂತ -3ನ್ನು ಬ್ಯಾಂಕ್ ನಂತರದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ.
ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಆಗಿನ ಸಂದರ್ಭಕ್ಕೆ ಕೋವಿಡ್ -19 ಸಾಂಕ್ರಾಮಿಕ ನಿಯಮದಂತೆ, ಕೇವಲ (i) ಸಂದರ್ಶನ ಮಾತ್ರ (50ಅಂಕಗಳು) ಅಥವಾ (ii) ಸಂದರ್ಶನ (30 ಅಂಕಗಳು) ಮತ್ತು ಗುಂಪು ಚರ್ಚೆ (20 ಅಂಕಗಳು) ಯಾವುದಾದರೊಂದು ಬ್ಯಾಂಕ್ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ’ಒಬಿಸಿ’ ವರ್ಗದ ಅಡಿಯಲ್ಲಿ ಹಂತ -3ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ’ಕೆನೆರಹಿತ ಪದರ’(.Non-Creamy layer) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿ ಕೊಂಡಿರುವ ಆದರೆ (’‘Non-Creamy layer’)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.
EWS ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು 20-2021ರ ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.
ಆಯ್ಕೆ ಪಟ್ಟಿ:
ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ- II ಮತ್ತು ಹಂತ- III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು.ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ -3 ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ -1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ -2 ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (250 ಅಂಕಗಳಲ್ಲಿ) ಅದರ 75ಅಂಕಗಳು ಮತ್ತು ಅಭ್ಯರ್ಥಿಗಳ ಹಂತ -3 ರಲ್ಲಿ ಪಡೆದ ಅಂಕಗಳನ್ನು (50 ಅಂಕಗಳಲ್ಲಿ) ಅದರ 25 ಅಂಕಗಳನ್ನು ಸೇರಿಸಿ(100 ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ.
ಹಂತ- 2 ಮತ್ತು ಹಂತ- 3 ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.
(ಮುಖ್ಯ ಪರೀಕ್ಷೆ ಮತ್ತು ಗುಂಪು ಚರ್ಚೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲಷ್ಟೇ ಮೆರಿಟ್ ಪಟ್ಟಿ ತಯಾರಿಸಿ, ನೇಮಕಾತಿ ಮಾಡಿಕೊಳ್ಳಲಾಗುತ್ತದೆ.)
ಅರ್ಜಿ ಸಲ್ಲಿಸಲು ವೆಬ್
ನೋಂದಣಿ ಮಾಡಬೇಕಾದ ಲಿಂಕ್: https://bank.sbi/careers
https://www.sbi.co.in/careers