NEW DELHI OCT 21
ಪ್ರಧಾನಮಂತ್ರಿ ನರೇಂದ್ರ ಮೋದಿ-Narendra Modi ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 1.7.2021ರಿಂದ ಪೂರ್ವಾನ್ವಯವಾಗುವಂತೆ ಬಾಕಿ ಇದ್ದ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ)DA ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್)DRಕ್ಕಾಗಿ ಹೆಚ್ಚುವರಿ ಕಂತಿನ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ. ಬೆಲೆ ಏರಿಕೆಯನ್ನು ಸರಿದೂಗಿಸಲು ಹಾಲಿ ಇರುವ ಶೇ.28ರಷ್ಟು ಮೂಲ ಪಾವತಿ/ ಪಿಂಚಣಿ ದರದಲ್ಲಿ ಶೇ.3ರಷ್ಟು ಹೆಚ್ಚಳವಾಗಲಿದೆ.
ಈ ಹೆಚ್ಚಳ ಒಪ್ಪಿತ ಸೂತ್ರದಂತೆ ಇರಲಿದೆ, ಅದು 7ನೇ ಕೇಂದ್ರ ವೇತನ ಆಯೋಗದ ಶಿಫಾರಸು ಆಧರಿಸಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡೂ ಸೇರಿ ವಾರ್ಷಿಕ ಬೊಕ್ಕಸದ ಮೇಲೆ 9,488.70 ಕೋಟಿ ರೂ. ಹೊರೆ ತಗುಲಲಿದೆ. ಇದರಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.