BENGALURU DEC 3
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೋವಿಡ್ ಕುರಿತ ಉನ್ನತ ಮಟ್ಟದ ಸಮತಿ ಓಮೈಕ್ರಾನ್ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೆಲವು ನಿರ್ಧಾರಗಳನ್ನು ತೆಗೆದು ಕೊಂಡಿತು. ಅದರ ವಿವರ ಇಲ್ಲಿದೆ.
- ಓಮೈಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ.
- ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ mild symptoms ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
- ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿದರು.
- ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ ಸಿ ಬಿ ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು.
- ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
- ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.
- ಒಮೈಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
- ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು.
- ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು.
- ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
- ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ.
- ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.
- ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
- ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
- ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
- ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.
- ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
- ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ.
- ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು.
- ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮೈಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು.