19.5 C
Karnataka
Friday, November 22, 2024

    Guest Lecturers:ಅತಿಥಿ ಉಪನ್ಯಾಸಕರ ನೇಮಕ: ಹಿರಿತನ, ಅರ್ಹತೆಗೆ ಆದ್ಯತೆ

    Must read

    BENGALURU FEB 3

    2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಿಂದ 9,800ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನುವ ವರದಿ ವಸ್ತುಸ್ಥಿತಿಗೆ ದೂರವಾಗಿದೆ’ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.

    ಈ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಗೆ ಗುರುವಾರ ಸ್ಪಷ್ಟನೆ ನೀಡಿರುವ ಅವರು, `ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ?’ ಎಂದರು.

    ನೇಮಕ ಪ್ರಕ್ರಿಯೆಯಲ್ಲಿ ಸೇವಾಹಿರಿತನ, ವಯಸ್ಸು ಮತ್ತು ಯುಜಿಸಿ ನಿಗದಿತ ಅರ್ಹತೆ ಮೂರನ್ನೂ ಸಮಾನವಾಗಿ ಪರಿಗಣಿಸಲಾಗಿದೆ. ನೇಮಕಾತಿಯಲ್ಲಿ ಇವರಿಗೇ ಆದ್ಯತೆ ಕೊಡಲಾಗುತ್ತಿದೆ. ಜತೆಗೆ ನಿಯಮಾನುಸಾರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ 14 ಸಾವಿರ ಮಂದಿಯ ಪೈಕಿ ಕೇವಲ 3,400 ಮಂದಿ ಮಾತ್ರ ಆಯ್ಕೆ ಆಗುತ್ತಿಲ್ಲ. ಆದರೆ, ಇವರಲ್ಲಿ ಕೂಡ ಹೆಚ್ಚಿನವರು ಅತ್ಯಂತ ಕಡಿಮೆ ಅನುಭವ ಹೊಂದಿದವರಾಗಿದ್ದಾರೆ ಎಂದು ಅವರು ವಿವರಿಸಿದರು.

    ಇದುವರೆಗೂ ಅತಿಥಿ ಉಪನ್ಯಾಸಕರು ಗರಿಷ್ಠ ಅವಧಿ ಬೋಧನೆ ಮಾಡಿದರೂ ಅವರ ಮಾಸಿಕ ವೇತನ 13 ಸಾವಿರ ರೂ. ದಾಟುತ್ತಿರಲಿಲ್ಲ. ಆದರೆ, ಈಗ ನೇಮಕ ಆಗುತ್ತಿರುವವರಿಗೆ ಗರಿಷ್ಠ 32 ಸಾವಿರ ರೂ.ಗಳವರೆಗೆ ಸಿಗುವ ಹಾಗೆ ಮಾಡಲಾಗಿದೆ ಎಂದು ಪ್ರದೀಪ್ ನುಡಿದರು.

    ಅತಿಥಿ ಉಪನ್ಯಾಸಕರ ಹುದ್ದೆಗೆ 60 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಇದುವರೆಗೆ ಅತಿಥಿ ಉಪನ್ಯಾಸಕರಾಗಿ ಕೆಲಸ‌ ಮಾಡಿದರವರನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!