ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನ ( SIDBI) ಹಿನ್ನಲೆ:
SIDBI ಸಂಸತ್ತಿನ ಕಾಯಿದೆಯ ಅಡಿಯಲ್ಲಿ ಸ್ಥಾಪಿಸಲಾದ ಪ್ರಧಾನ ಹಣಕಾಸು ಸಂಸ್ಥೆಯಾಗಿದೆ. ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪ್ರಚಾರ, ಹಣಕಾಸು ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಏಳೂವರೆ ದಶಕಗಳಿಂದ ಭಾರತದ ಆರ್ಥಿಕತೆಯ ಪ್ರಮುಖ ಆಧಾರ ಸ್ತಂಭವಾಗಿದೆ. SIDBI ಕೈಗಾರಿಕಾ ವಲಯದಲ್ಲಿ ಸೃಜನಶೀಲತೆ, ನಾವೀನ್ಯತೆ ಮತ್ತು ಚೈತನ್ಯಕ್ಕೆ ನೀಡಿದ ಕೊಡುಗೆಯಿಂದ ದೇಶದಾದ್ಯಂತ ಕೈಗಾರಿಕಾ ಅಭಿವೃದ್ಧಿಯ ವಿಸ್ತರಿಸುವಿಕೆಗೆ ಕಾರಣವಾಗಿದೆ. MSME ಗಳ ಹಣಕಾಸು, ಪ್ರಚಾರ ಮತ್ತು ಅಭಿವೃದ್ಧಿಯ ವಿವಿಧ ಯೋಜನೆಗಳಿಗಾಗಿ SIDBI ಕಾರ್ಯನಿರ್ವಹಿಸುತ್ತಿದೆ.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ಐಡಿಬಿಐ) ಖಾಲಿ ಇರುವ ಗ್ರೇಡ್ ‘A’ ವೃಂದದ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 28 ರೊಳಗೆ ಅರ್ಜಿ ಸಲ್ಲಿಸಬಹುದು. ಜನರಲ್ ಸ್ಟ್ರೀಮ್ ನ ಒಟ್ಟು 50 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಒಟ್ಟು ಹುದ್ದೆಗಳ ಪೈಕಿ ಎಸ್‌ಸಿ ಅಭ್ಯರ್ಥಿಗಳಿಗೆ 8, ಎಸ್‌ಟಿ ಅಭ್ಯರ್ಥಿಗಳಿಗೆ 4, ಒಬಿಸಿ ವರ್ಗಕ್ಕೆ 11, ಆರ್ಥಿಕ ದುರ್ಬಲ ವರ್ಗದವರಿಗೆ 5 ಮತ್ತು ಸಾಮಾನ್ಯ ವರ್ಗಕ್ಕೆ 22 ಹುದ್ದೆಗಳನ್ನು ಮೀಸಲಿಡಲಾಗಿದೆ.
ಆನ್ ಲೈನ್ ಪರೀಕ್ಷೆ(ಅಗತ್ಯವಿದ್ದಲ್ಲಿ) ಗುಂಪು ಚರ್ಚೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿಯಲ್ಲಿ ನೇಮಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಬ್ಯಾಂಕ್ ತಿಳಿಸಿದೆ.
ನವೆಂಬರ್ 08, 2023 ಕ್ಕೆ ವಯಸ್ಸಿನ ಮಿತಿ:
ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳನ್ನು ಮೀರಿರಬಾರದು. ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸರಕಾರದ ನಿಯಮಾವಳಿ ಪ್ರಕಾರ ಸಡಿಲಿಕೆಯು ಈ ಕೆಳಗಿನಂತೆ ಇರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ 5 ವರ್ಷ ಇತರೆ ಹಿಂದುಳಿದ ವರ್ಗಗಳಿಗೆ (ನಾನ್-ಕ್ರೀಮಿ ಲೇಯರ್) 3 ವರ್ಷಗಳು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು.
ಅರ್ಹತೆಗಳೇನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ಕನಿಷ್ಠ ಶೇಕಡಾ 60 ಅಂಕಗಳನ್ನು (ಎಸ್ಸಿ/ಎಸ್ ಟಿ/ವಿಶೇಷ ಚೇತನರು ಶೇಕಡಾ 55) ಪಡೆದಿರಬೇಕು.
ಅಥವಾ
ಸಿಎ/ಸಿಎಸ್/ಸಿಡಬ್ಲೂಎ/ಸಿಎಫ್ಎ/ ಸಿಎಂಎ ಅಥವಾ ಕಾನೂನಿನಲ್ಲಿ/ಇಂಜಿನಿಯರಿಂಗ್ ನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ಕನಿಷ್ಠ ಶೇಕಡಾ 60% ಅಂಕಗಳನ್ನು (ಎಸ್ಸಿ/ಎಸ್ ಟಿ/ವಿಶೇಷ ಚೇತನರು ಶೇಕಡಾ 55) ಪಡೆದಿರಬೇಕು.
ಶೈಕ್ಷಣಿಕ ಅರ್ಹತೆಯ ನಂತರ ಕೆಲಸದ ಅನುಭವ:
ಇದರೊಂದಿಗೆ ಅಭ್ಯರ್ಥಿಗಳು ಕನಿಷ್ಠ 2 ವರ್ಷ ವಾಣಿಜ್ಯ ಬ್ಯಾಂಕುಗಳು / ಅಖಿಲ ಭಾರತ ಹಣಕಾಸು ಸಂಸ್ಥೆ( All India Financial Institution ) ನಲ್ಲಿ MSME ಸಾಲ ವಿಭಾಗದಲ್ಲಿ(ವೈಯಕ್ತಿಕ ಸಾಲ, ಶೈಕ್ಷಣಿಕ ಸಾಲ, ವಾಹನ ಸಾಲ, ವಸತಿ ಸಾಲ, ಇತ್ಯಾದಿ ಹೊರತುಪಡಿಸಿ) ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
ಅಥವಾ
ಮೂರು ವರ್ಷಗಳ ಪ್ರಮುಖ NBFCಗಳಲ್ಲಿ ವ್ಯವಸ್ಥಿತವಾದ MSME ಸಾಲದಲ್ಲಿ ವೈಯಕ್ತಿಕವಲ್ಲದ ಸಾಲ / ಕಾರ್ಪೊರೇಟ್ ಸಾಲ ನೀಡಿದ ಸೇವಾನುಭವ ಹೊಂದಿರಬೇಕು.
ಅರ್ಜಿ ಶುಲ್ಕ ಏಷ್ಟು?:
ಎಸ್‌ಸಿ/ಎಸ್‌ಟಿ/ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆದರೆ, 175 ರೂ, ಇಂಟಿಮೇಷನ್ ಫೀ ಪಾವತಿಸಬೇಕು. ಉಳಿದ ಎಲ್ಲಾ ವರ್ಗದವರು ಇಂಟಿಮೇಷನ್ ಫೀ ಸೇರಿಸಿ 1,100 ರೂ. ಪಾವತಿಸಬೇಕು. ಎಸ್‌ಐಡಿಬಿಐ ಸಿಬ್ಬಂದಿಯಾಗಿದ್ದಲ್ಲಿ ಸಂಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಶುಲ್ಕಪಾವತಿ:
ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ (ರುಪೇ / ವೀಸಾ / ಮಾಸ್ಟರ್ ಕಾರ್ಡ್ / ಮೆಸ್ಟ್ರೋ), ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, IMPS, ನಗದು ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು ಬಳಸಿಕೊಂಡು ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ನಲ್ಲಿ ಮಾತ್ರ.
ಪರೀಕ್ಷಾ ಪೂರ್ವ ತರಬೇತಿ:
ಎಸ್‌ಸಿ/ಎಸ್‌ಟಿ/ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 10 ದಿನಗಳ ಪರೀಕ್ಷಾ ಪೂರ್ವ ತರಬೇತಿಯನ್ನು ಬ್ಯಾಂಕ್ ವತಿಯಿಂದ ನೀಡಲಾಗುತ್ತದೆ. ಆನ್ ಲೈನ್ ಮೂಲಕವೇ ತರಬೇತಿ ಇರುತ್ತದೆ. ತರಬೇತಿಯ ಅಗತ್ಯವಿದ್ದಲ್ಲಿ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಉಲ್ಲೇಖಿಸಬೇಕು.
ಪರೀಕ್ಷಾಕೇಂದ್ರ: (ಪರೀಕ್ಷೆ ನಡೆದಲ್ಲಿ) ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಮಾತ್ರ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 28, 2023
ಸಂದರ್ಶನ ಮತ್ತು ಗುಂಪು ಚರ್ಚೆ ನಡೆಯುವ ದಿನಾಂಕ: ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿ 2024
ನೇಮಕ ಹೇಗೆ?
ಆನ್ ಲೈನ್ ಪರೀಕ್ಷೆ(ಅಗತ್ಯವಿದ್ದಲ್ಲಿ) ಸಂದರ್ಶನ ಮತ್ತು ಗುಂಪು ಚರ್ಚೆ.
ವೇತನ: ರೂ.44,500- ರೂ. 89,150
ಹೊಸದೇನು ಗಮನಿಸಿ:
- ಈ ಹಿಂದೆ ಎಲ್ಲ ಬ್ಯಾಂಕ್ ಹಾಗೂ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಫೋಟೋ, ಸಹಿ, ಎಡ ಹೆಬ್ಬೆರಳಿನ ಗುರುತು, ಕೈ ಬರಹದ ಘೋಷಣೆ ಮಾತ್ರ ಅಪ್ ಲೋಡ್ ಮಾಡಲಾಗುತ್ತಿತ್ತು. ಪಡೆದ ಅಂಕಗಳನ್ನು ಶೈಕ್ಷಣಿಕ ಕಾಲಂ ನಲ್ಲಿ ಮಾಹಿತಿ ನೀಡಬೇಕಾಗಿತ್ತು. ಆದರೆ ಈ ಪರೀಕ್ಷೆಗೆ ಶೈಕ್ಷಣಿಕ ಮಾಹಿತಿಗಳ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.
ಅಪ್‌ಲೋಡ್ ಮಾಡುವ ವಿಧಾನ:
- ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳಿಗೆ ಪ್ರತಿಯೊಂದಕ್ಕೂ ಪ್ರತ್ಯೇಕ ಲಿಂಕ್‌ಗಳುಒದಗಿಸಲಾಗುತ್ತಿದೆ.ಇವುಗಳಲ್ಲಿಫೋಟೋ,ಸಹಿ,ಎಡ ಹೆಬ್ಬೆರಳಿನ ಗುರುತು, ಕೈ ಬರಹದ ಘೋಷಣೆ, ವೈಯಕ್ತಿಕ ಮಾಹಿತಿ(Bio Data), ಶೈಕ್ಷಣಿಕ ಪ್ರಮಾಣಪತ್ರ ಮತ್ತು ಸಂಬಂಧಿತ ಕ್ಷೇತ್ರದಲ್ಲಿರುವ ಅನುಭವ / ಕೆಲಸದಿಂದ ನಿರ್ಗಮಿಸಿದ್ದಲ್ಲಿ ರಿಲೀವಿಂಗ್ ಪತ್ರ. ಎಲ್ಲವನ್ನು ಅವುಗಳಿಗೆ ಸಂಬಂಧಿಸಿದ ಆಯಾಯ ಲಿಂಕ್ ಗಳನ್ನು ಕ್ಲಿಕ್ ಮಾಡಿ ಪ್ರತಿಯೊಂದು ಮಾಹಿತಿ ಯನ್ನು ಅಪ್ಲೋಡ್ ಮಾಡೋದನ್ನಮರೆಯಬೇಡಿ..
ಆಯ್ಕೆ ವಿಧಾನ:
- ಆಯ್ಕೆ ಪ್ರಕ್ರಿಯೆಯು ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ನಡೆಯುತ್ತದೆ.
- ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸಿದ ನಂತರ,ಪೂರ್ವಭಾವಿಯಾಗಿ ಅರ್ಜಿ ನಮೂನೆಯಲ್ಲಿ ನಮೂದಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅದಕೆ ಪೂರಕವಾಗಿ ಅಪ್‌ಲೋಡ್ ಮಾಡಿದ ದಾಖಲೆಗಳನ್ನು ಪರಿಶೀಲಿಸಿ ನಿಗದಿಪಡಿಸಿದ ಅರ್ಹತೆ, ಸೂಕ್ತತೆ/ಅನುಭವ, ಇತ್ಯಾದಿಗಳ ಮೇಲೆ ಅರ್ಹ ಅಭ್ಯರ್ಥಿ ಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
- ಪೂರ್ವಭಾವಿ ಸ್ಕ್ರೀನಿಂಗ್ ನಂತರ ಆಯ್ಕೆಯಾದವರು ಮೂಲ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿರುತ್ತಾರೆ.
- ನಂತರ ಬ್ಯಾಂಕ್ ಆನ್‌ಲೈನ್ ಸೈಕೋಮೆಟ್ರಿಕ್ ಪರೀಕ್ಷೆ ಅಥವಾ ವ್ಯಕ್ತಿತ್ವ, ಸಂವಹನದ ರೀತಿ, ಸ್ಪಷ್ಟತೆ ಮತ್ತುಸಮಸ್ಯೆ-ಪರಿಹರಿಸುವಿಕೆನಿರ್ಣಯಿಸುವ ನವೀನತೆ, ದಕ್ಷತೆಯ ಬಗ್ಗೆ ಕಾಳಜಿ,ಇವುಗಳಿಗೆ ಸಂಬಂದಿಸಿದಂತೆ ಯಾವುದು ಸೂಕ್ತವಾಗಿದೆಯೋ ಅಂತಹ ಪರೀಕ್ಷೆಯನ್ನು ನಡೆಸುತ್ತದೆ.
- ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಇಚ್ಛೆ,ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹುದ್ದೆಗೆ ಸೂಕ್ತತೆ ಇತ್ಯಾದಿ. ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂದರ್ಶನದ ಸಮಿತಿಯ ಮುಂದೆ ನೀಡಲಾಗುವುದು.
- ಸೈಕೋಮೆಟ್ರಿಕ್ ಪರೀಕ್ಷೆ ಯನ್ನು ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಹಾಜರಾಗಲು ಕರೆಯಲಾಗುವುದು, ಇದು SIDBI ಯ ವಿವಿಧ ಕಚೇರಿಗಳಲ್ಲಿ ನಡೆಯುತ್ತದೆ. ಅಭ್ಯರ್ಥಿಯು ಮೊದಲು ಗುಂಪು ಚರ್ಚೆಗೆ ಹಾಜರಾಗಬೇಕು ಮತ್ತು ನಂತರ ಅದೇ ದಿನ ಸಂದರ್ಶನಕ್ಕೆ ಹಾಜರಾಗಬೇಕು.
- ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಗರಿಷ್ಠ ಅಂಕಗಳು 100. ಪಡೆಯಬೇಕಾದ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸuತ್ತದೆ. ಗುಂಪು ಚರ್ಚೆಯಲ್ಲಿ ಕನಿಷ್ಠ ಅರ್ಹತಾ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನದ ಅರ್ಹತೆಗಾಗಿ ಪರಿಗಣಿಸ ಲಾಗುವುದು.
- ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ ಅಭ್ಯರ್ಥಿಯು ಗಳಿಸಿದ ಸಂಯೋಜಿತ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆಯನ್ನು ಆಧರಿಸಿ ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ನಡೆಸುವ ಹಕ್ಕನ್ನು ಬ್ಯಾಂಕ್ ಕಾಯ್ದಿರಿಸಿಕೊಂಡಿದೆ.ಆನ್‌ಲೈನ್ ಪರೀಕ್ಷೆ ಸೂಕ್ತವೆಂದು ಭಾವಿಸಿದರೆ ಮಾತ್ರ ಪರೀಕ್ಷೆ ನಡೆಸಲಾಗುವುದು.ಪರೀಕ್ಷಾ ಕೇಂದ್ರಗಳ ತಾತ್ಕಾಲಿಕ ಪಟ್ಟಿ ಯಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರವಿದೆ. (ಪರೀಕ್ಷೆ ಅಗತ್ಯ ವಿರುವ ಸಂದರ್ಭದಲ್ಲಿ ಮಾತ್ರ ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ನಡೆಸ ಲಾಗುತ್ತದೆ).
- ಇದೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವರದಾನ ವಾಗಬಹುದು. ಪರೀಕ್ಷೆ ನಡೆಯದಿದ್ದಲ್ಲಿ ಕೇವಲ ಸೈಕೋಮ್ಯಾಟ್ರಿಕ್ ಟೆಸ್ಟ್ ಗುಂಪು ಚರ್ಚೆ ಹಾಗೂ ಸಂದರ್ಶನ ಮಾತ್ರ ನಡೆಯಲಿದೆ.
- ಗುಂಪು ಚರ್ಚೆ ಮತ್ತು ಸಂದರ್ಶನವು ಲಕ್ನೋ, ಮುಂಬೈ, ನವದೆಹಲಿ, ಚೆನ್ನೈ ಮತ್ತು ಕೋಲ್ಕತ್ತಾ ದಲ್ಲಿ ಮಾತ್ರ ನಡೆಯಲಿದೆ.
ವಿವರಗಳಿಗೆ: https://sidbi.in or www.sidbi.in
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣವಾಗಿ ಅಧಿಸೂಚನೆಯನ್ನುಓದಿಕೊಳ್ಳಬೇಕು. ನೇಮಕ ಸಂಬಂಧ ಎಲ್ಲಾ ಮಾಹಿತಿಯನ್ನು SIDBI ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತದೆ.