1 POSTS
ಸಂಕೇತದತ್ತ ಎಂಬ ಹೆಸರಿನಿಂದ ಸುಪ್ರಸಿದ್ಧರಾಗಿರುವ ಸಂಕೇತ ಗುರುದತ್ತ ಅವರ ಮೂಲ ತುಮಕೂರು. ಅಲ್ಲಿ ತುಮಕೂರುವಾರ್ತೆ, ಪ್ರಜಾಪ್ರಗತಿ, ಕನ್ನಡ ಗಂಗೋತ್ರಿ, ನಗೆಮಿತ್ರ ಹಾಗೂ ನಗೆಮುಗುಳು, ಪತ್ರಿಕೆಗಳಿಗೆ ಕೆಲಸ ಮಾಡಿದ್ದರು. ಬೆಂಗಳೂರಿಗೆ ಬಂದು ಸುದ್ದಿ ಸಂಗಾತಿ ವಾರ ಪತ್ರಿಕೆಯಲ್ಲಿ ಕೆಲ ಕಾಲವಿದ್ದರು. ಆನಂತರ ಧಾರಾವಾಹಿ, ಸಿನಿಮಾಗಳಲ್ಲಿ ಕೆಲಸ ಮಾಡಿದರು. ನಂತರದಲ್ಲಿ ಕಿರ್ಲೋಸ್ಕರ್ ಮಲ್ಟಿಮೀಡಿಯಾಗೆ ಸೇರ್ಪಡೆ. ಅಲ್ಲಿಂದ ಒಂದಿಷ್ಟು ಕಲಿತು ಹೈದರಾಬಾದನತ್ತ ಪಯಣ. ಅಲ್ಲಿ ಹನ್ನೊಂದು ವರ್ಷವಿದ್ದು ಮತ್ತೆ ಬೆಂಗಳೂರಿಗೆ ವಾಪಸ್ ಆಗಿ ಸುಧಾ, ಮಯೂರ, ಪ್ರಜಾವಾಣಿ ವಿಶೇಷಾಂಕ, ಹೊಸತು, ಪ್ರಿಯಾಂಕಗಳಿಗೆ ಫ್ರೀಲ್ಯಾನ್ಸ್ ಆಗಿ ಕೆಲಸ ನಿರ್ವಹಿಸಿದರು. ಆ ಸಮಯದಲ್ಲಿಯೇ ಸಿಕ್ಕ ಮತ್ತೊಂದು ಉತ್ತಮ ಅವಕಾಶ ಕನ್ನಡಪ್ರಭದಲ್ಲಿ ಕಲಾಕಾರನಾಗಿದ್ದು. ಕಲಾ ವಿಭಾಗದ ಜೊತೆಗೆ ಪುರವಣಿಯ ಕೆಲ ಪುಟಗಳ ಜವಾಬ್ದಾರಿ ಸಿಕ್ಕಿತು. ಅಲ್ಲಿ ನಾಟಕ, ಸಿನಿಮಾ ಹಾಗೂ ಕಲಾಪ್ರದರ್ಶನಗಳ ವಿಮರ್ಶೆ, ವ್ಯಕ್ತಿ ಹಾಗೂ ಸಾಂಸ್ಕ್ರತಿಕ ತಂಡಗಳ ಪರಿಚಯ ಲೇಖನ ಹೀಗೆ ಹಲವಾರು ವಿಭಾಗದಲ್ಲಿ ಕೆಲಸ ಮಾಡಿದ ಅನುಭ ಹೊಂದಿದ್ದಾರೆ.