21.7 C
Karnataka
Wednesday, November 27, 2024
    Home Blog Page 44

    INDIAN STOCK MARKET:ಹೂಡಿಕೆ ಎಂಬ ಚಕ್ರವ್ಯೂಹದೊಳಗೆ ಅಭಿಮನ್ಯುಗಳಾಗದೆ, ಅರ್ಜುನರಾಗಬೇಕು

    ಷೇರುಪೇಟೆ ಚಲಿಸುತ್ತಿರುವ ರೀತಿ ಮತ್ತು ದಿನೇ ದಿನೇ ನಿರ್ಮಿಸುತ್ತಿರುವ ಗರಿಷ್ಠದಿಂದ ದಾಖಲೆಯ ಏರಿಕೆಯು ಹಲವರಿಗೆ ವಿಸ್ಮಯಕಾರಿಯಾಗಿರಬಹುದು. ಇದೇ ನಮ್ಮ ದೇಶದ ಆಸ್ತಿ ಎನಿಸಿಕೊಂಡಿರುವ ಜನಸಾಮಾನ್ಯರ ಶಕ್ತಿ. ಎಲ್ಲವೂ ವಿಚಿತ್ರ ಎಂದೆನಿಸಿದರೂ ಅದು ಕಟು ಸತ್ಯ.

    ಅಕ್ಟೋಬರ್ 18ರ ಸೆನ್ಸೆಕ್ಸ್

    ಸೆಪ್ಟೆಂಬರ್‌ ತಿಂಗಳಲ್ಲಿ ಮ್ಯೂಚುಯಲ್‌ ಫಂಡ್‌ ಗಳಿಂದ ವಿವಿಧ ಸಾಲ ನಿಧಿಯೋಜನೆ (Debt funds) ಗಳಾದ ಲಿಕ್ವಿಡ್‌ ಫಂಡ್‌, ಅಲ್ಟ್ರಾ ಷಾರ್ಟ್‌ ಡ್ಯುರೇಷನ್‌ ಫಂಡ್‌, ಲೋ ಡ್ಯುರೇಷನ್‌ ಫಂಡ್‌, ಮನಿ ಮಾರ್ಕೆಟ್‌ ಫಂಡ್‌, ಬ್ಯಾಂಕಿಂಗ್‌ ಅಂಡ್‌ ಪಿ ಎಸ್‌ ಯು ಫಂಡ್‌, ಕಾರ್ಪೊರೇಟ್‌ ಬಾಂಡ್‌ ಫಂಡ್‌ ಗಳ ಮೂಲಕ ಅತಿ ಹೆಚ್ಚಿನ ಹಣದ ಹೊರಹರಿವು ಸಾಮಾನ್ಯ ಪರಿಸ್ಥಿತಿಯಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತಿತ್ತು. ಆದರೂ ಸಹ ಪೇಟೆಗಳು ಉತ್ತುಂಗಕ್ಕೇರುತ್ತಿರುವುದು ಸೋಜಿಗವೆನಸುವುದು.

    ಇದಕ್ಕೆ ಕಾರಣ ಷೇರುಪೇಟೆಗಳತ್ತ ನೇರವಾಗಿಯೂ ಮತ್ತು ಮ್ಯುಚುಯಲ್‌ ಫಂಡ್‌ ಗಳ ಮೂಲಕ, ಎಸ್‌ ಐ ಪಿ ಗಳ ಮೂಲಕ ಬರುತ್ತಿರುವ ಹಣದ ಒಳಹರಿವು. ಈಕ್ವಿಟಿ ಫಂಡ್‌ ಗಳಲ್ಲಿ ಮಲ್ಟಿಕ್ಯಾಪ್‌ ಮತ್ತು ಫ್ಲೆಕ್ಸಿ ಫಂಡ್‌ ಗಳು ಒಟ್ಟು ಒಳಹರಿವು ಕಂಡರೆ ಇ ಎಲ್‌ ಎಸ್‌ ಎಸ್‌ ಮತ್ತು ಸ್ಮಾಲ್‌ ಕ್ಯಾಪ್‌ ಫಂಡ್ ಗಳಿಂದ ಹೊರಹರಿವು ದಾಖಲಾಗಿದೆ. ಮಾಸಿಕ ಎಸ್‌ ಐ ಪಿ ಗಳ ಮೂಲಕ ಸಂಗ್ರಹವಾದ ರೂ.10,351 ಕೋಟಿಯು ಹೊಸದಾಖಲೆಯನ್ನು ಸೃಷ್ಟಿಸಿದೆ. ಮ್ಯೂಚುಯಲ್ ಫಂಡ್‌ ಗಳ ಇಂಡೆಕ್ಸ್‌ ಫಂಡ್‌ ಮತ್ತು ಇಟಿಎಫ್‌ ಗಳ ಮೂಲಕವೂ ಸುಮಾರು ರೂ.10 ಸಾವಿರ ಕೋಟಿಗೂ ಹೆಚ್ಚಿನ ಹಣ ಒಳಹರಿದಿರುವುದು ಸಹ ಪೇಟೆಯ ಏರಿಕೆಗೆ ಪೂರಕ ಅಂಶವಾಗಿದೆ.

    ಯಾವುದೇ ಒಂದು ಸಾರ್ವಜನಿಕ ಕಾರ್ಯಕ್ರಮ, ಕ್ರಿಕೆಟ್‌, ಸಿನಿಮಾ ಯಶಸ್ಸು ಕಾಣಬೇಕಾದರೆ ಅದರ ಹಿಂದೆ ಜನಸಾಮಾನ್ಯರ ಭಾಗವಹಿಸುವಿಕೆ ಅತಿ ಮುಖ್ಯ. ಅಂತೆಯೇ ಷೇರುಪೇಟೆಯ ಈಗಿನ ವಾತಾವರಣಕ್ಕೆ ಮೂಲ ಕಾರಣ ಜನಸಾಮಾನ್ಯರ ಶಕ್ತಿ. ಈ ವಾತಾವರಣವನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ಧಾರಿತನವು ಸಧ್ಯ ಕಾರ್ಪೊರೇಟ್‌ ವಲಯ ಮತ್ತು ಸರ್ಕಾರಗಳ ಮೇಲಿದೆ.

    ಕಾರ್ಪೊರೇಟ್‌ ಗಳು ಈ ವಾತಾವರಣವನ್ನು ಮುಂದುವರೆಸಿಕೊಂಡು ಹೋಗಬೇಕಿದ್ದಲ್ಲಿ ಉತ್ತಮ ಸಾಧನೆಯನ್ನು ಮತ್ತು ಬೆಂಬಲಿಸುತ್ತಿರುವ ಷೇರುದಾರರ ಹಿತವನ್ನು ಕಾಪಾಡುವತ್ತ ದಾಪುಗಾಲಿಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ನಿಯಂತ್ರಕರು ಮತ್ತು ಸರ್ಕಾರ ಈ ವಾತಾವರಣವನ್ನು ಕದಡುವಂತಹವರ ಮೇಲೆ ಕಣ್ಗಾವಲು ಇರಿಸಿ ನಂಬಿಕೆಯನ್ನು ಉಳಿಸಿಕೊಡುವಂತಹ ಗುರುತರ ಜವಾಬ್ಧಾರಿ ವಹಿಸಿಕೊಳ್ಳಲೇಬೇಕಾಗಿದೆ.

    ಈ ವಾತಾವರಣಕ್ಕೆ ಪೂರಕವಾದ ಅಂಶವೆಂದರೆ ಹಿಂದಿನ ವರ್ಷದ ಅಕ್ಟೋಬರ್‌ 16 ರಂದು ಸೆನ್ಸೆಕ್ಸ್‌ -BSE SENSEX_39,982.98 ರಲ್ಲಿದ್ದು ಪೇಟೆಯ ಬಂಡವಾಳೀಕರಣ ಮೌಲ್ಯವು ರೂ.158.37 ಲಕ್ಷ ಕೋಟಿಯಲ್ಲಿತ್ತು. ಅಂದು ನೋಂದಾಯಿತ ಗ್ರಾಹಕರ ಸಂಖ್ಯೆಯು 5.56 ಕೋಟಿ ಇತ್ತು. ಈ ವರ್ಷ ಅಕ್ಟೋಬರ್‌ 14 ರ ವಾರಾಂತ್ಯದಲ್ಲಿ ಸೆನ್ಸೆಕ್ಸ್‌ 61,305.95 ರಲ್ಲಿದೆ. ಅಂದರೆ 21,322.97 ಪಾಯಿಂಟುಗಳ ಏರಿಕೆ ಈ ಅವಧಿಯಲ್ಲಿ ಸೆನ್ಸೆಕ್ಸ್‌ ಕಂಡಿದೆ. ಪೇಟೆಯ ಬಂಡವಾಳೀಕರಣ ಮೌಲ್ಯವು ರೂ.272.76 ಲಕ್ಷ ಕೋಟಿಯಾಗಿದೆ. ಮತ್ತೊಂದು ಪ್ರಮುಖ ಅಂಶ ಎಂದರೆ ಈಗ ನೋಂದಾಯಿತ ಗ್ರಾಹಕರ ಸಂಖ್ಯೆಯು 8,27ಕೋಟಿಯಲ್ಲಿದೆ. ಅಂದರೆ ಈ ಒಂದು ವರ್ಷದ ಅವಧಿಯಲ್ಲಿ 2.7 ಕೋಟಿ ನೋದಾಯಿತ ಹೂಡಿಕೆದಾರರ ಸಂಖ್ಯೆಯು ಹೆಚ್ಚಾಗಿದೆ. ಈ ಪ್ರಮಾಣದ ಹೂಡಿಕೆದಾರರ ಮೂಲಕ ಹರಿದುಬರುತ್ತಿರುವ ಹಣದ ಒಳಹರಿವು ಸಹ ಪೇಟೆಯ ಏರಿಕೆಗೆ ಪೂರಕ ಅಂಶವಾಗಿದೆ.

    ಅಗ್ರಮಾನ್ಯ ಕಂಪನಿಗಳ ಷೇರಿನ ಬೆಲೆಗಳ ಏರಿಳಿತಗಳ ಲಾಭವನ್ನು ವಹಿವಾಟುದಾರರು ಪಡೆದುಕೊಳ್ಳುತ್ತಿರುವಾಗ ಸಣ್ಣ ಹೂಡಿಕೆದಾರರು ಸಹ ಅಲ್ಪ ಪ್ರಮಾಣದಲ್ಲಿ ಲಾಭ ಗಳಿಸಲು ಪ್ರಯತ್ನಿಸಬಹುದು. ಆದರೆ ಸದಾ ನೆನಪಿನಲ್ಲಿಡಬೇಕಾದ ಅಂಶ ಎಂದರೆ ಈ ಚಟುವಟಿಕೆಯು ವ್ಯವಹಾರಿಕ ದೃಷ್ಠಿಯಿಂದ, ದೀರ್ಘಕಾಲೀನ ಎಂಬ ಮೋಹಕ ಪದದಿಂದ ದೊರೆಯುವ ಅವಕಾಶ ಕಳೆದುಕೊಳ್ಳದೆ, ʼಆನೆಯಾಗಿ ಸೊಪ್ಪು ತಿನ್ನುವುದಕ್ಕಿಂತ – ಇರುವೆಯಾಗಿ ಸಕ್ಕರೆ ತಿನ್ನುವುದು ಲೇಸುʼ ಎಂಬುದು. ಗಜಗಾತ್ರದ ವಹಿವಾಟಿನ ವ್ಯಾಮೋಹ ಬೇಡ, ಸೀಮಿತ ಲಾಭಕ್ಕೆ ಸೀಮಿತಗೊಳಿಸಿಕೊಂಡಲ್ಲಿ ಬಂಡವಾಳವೂ ಸುರಕ್ಷಿತ ಮತ್ತು ಮನಸ್ಸು ಮತ್ತು ದೇಹಗಳ ಸೌಖ್ಯವೂ ಸಾಧ್ಯ. ಸಾಧ್ಯವಾದಷ್ಠು ಹೂಡಿಕೆಗುಚ್ಚವನ್ನು ಹೆಚ್ಚು ಹೆಚ್ಚು ಕಂಪನಿಗಳಿಗೆ ವಿಸ್ತರಿಸಿರಿ ಮತ್ತು ಷೇರಿನ ದರಗಳ ಕುಸಿತಕ್ಕೆ ಕಾಯಿರಿ. ಖಂಡಿತಾ ಅವಕಾಶಗಳು ಸೃಷ್ಠಿಯಾಗುತ್ತವೆ. ಇತ್ತೀಚಿನ ಕೆಲವು ಉದಾಹರಣೆಗಳನ್ನು ಪರಿಶೀಲಿಸಿರಿ. ಇದು ಯಾವುದೇ ರೀತಿಯ ಶಿಫಾರಸ್ಸು ಅಲ್ಲ, ಕೇವಲ ನಿದರ್ಶನಕ್ಕೆ ಮಾತ್ರ.

    ಬೊರೊಸಿಲ್‌ರಿನ್ಯೂವಬಲ್ಸ್‌ಲಿಮಿಟೆಡ್:ಈ ಕಂಪನಿಯು ಕಳೆದ ಒಂದು ತಿಂಗಳಿನಲ್ಲಿ ರೂ.293 ರ ಸಮೀಪದಿಂದ ರೂ.453 ರವರೆಗೂ ಜಿಗಿತ ಕಂಡಿದೆ. ಸೋಜಿಗವೆಂದರೆ ಹಿಂದಿನ ವರ್ಷದ ಅಕ್ಟೋಬರ್‌ನಂದು ರೂ.72 ರಲ್ಲಿದ್ದಂತಹ ಈ ಕಂಪನಿ ಷೇರಿನ ಬೆಲೆ ಈ ವರ್ಷದ ಅಕ್ಟೋಬರ್‌14 ರಂದು ರೂ.453 ನ್ನು ತಲುಪಿದೆ ಎಂದರೆ ಒಂದೇ ವರ್ಷದಲ್ಲಿ ರೂ.380 ಕ್ಕೂ ಹೆಚ್ಚಿನ ಏರಿಕೆ ಕಂಡು ವಿಜೃಂಭಿಸಿದೆ. ಈ ತಿಂಗಳ 21 ರಂದು ಕಂಪನಿಯು ತನ್ನ ಎರಡನೇ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸುವ ಕಾರ್ಯಸೂಚಿ ಪ್ರಕಟಿಸಿದೆ.

    ಈ ಸುದ್ಧಿಯೇ ಹೆಚ್ಚಿನ ನಿರೀಕ್ಷೆಯನ್ನು ಸೃಷ್ಠಿಸಿದೆಯೇ? ಕಾದು ನೋಡೋಣ. ಮತ್ತೊಂದು ಪ್ರಮುಖ ಅಂಶ ಎಂದರೆ ಈ ಕಂಪನಿಯು 65,250 ಷೇರುಗಳನ್ನು ಕೇಂದ್ರ ಸರ್ಕಾರದ ಇನ್ವೆಸ್ಟರ್‌ ಎಜುಕೇಷನ್‌ಅಂಡ್‌ಪ್ರೊಟೆಕ್ಷನ್‌ಫಂಡ್‌ಗೆ ವರ್ಗಾಯಿಸಿದೆ. ಸೋಮವಾರ ತನ್ನ ಏರಿಕೆಯನ್ನು ಮುಂದುವರೆಸಿ ರೂ.475 ರಲ್ಲಿದೆ.

    ಗೋದಾವರಿ ಪವರ್‌ಅಂಡ್‌ಇಸ್ಪಾಟ್‌ ಲಿಮಿಟೆಡ್:

    ಈ ಕಂಪನಿಯು ಆಗಸ್ಟ್‌ ತಿಂಗಳಲ್ಲಿ ಪ್ರತಿ ಷೇರಿಗೆ ರೂ.18.50 ಯಂತೆ ಲಾಭಾಂಶ ವಿತರಿಸಿದ ನಂತರ ರೂ.1,400 ರ ಸಮೀಪದಿಂದ ನಿರಂತರವಾಗಿ ಇಳಿಕೆ ಕಂಡು ರೂ.1,000 ದ ವರೆಗೂ ಕುಸಿಯಿತು. ಆ ಸಂದರ್ಭದಲ್ಲಿ ಕಂಪನಿಯು ಬೋನಸ್‌ ಷೇರು ಮತ್ತು ಮುಖಬೆಲೆ ಸೀಳಿಕೆಯ ಪರಿಶೀಲನೆ ಪ್ರಕಟಿಸಿದ ನಂತರ ಏರಿಕೆಯಿಂದ ರೂ. 1,400 ಕ್ಕೆ ಜಿಗಿದು ಮತ್ತೆ ಕುಸಿಯಿತು. 14ನೇ ಅಕ್ಟೋಬರ್‌ ಕಂಪನಿಯ ಷೇರುದಾರರು ಮುಖಬೆಲೆ ಸೀಳಿಕೆ ಮತ್ತು ಬೋನಸ್‌ ಷೇರಿಗೆ ಸಮ್ಮತಿಸಿದ್ದರಿಂದ ಸೋಮವಾರ ಷೇರಿನ ಬೆಲೆ ರೂ.1,425 ರ ಸಮೀಪದಲ್ಲಿ ಗರಿಷ್ಠ ಆವರಣಮಿತಿಯಲ್ಲಿತ್ತು. ಈ ತಿಂಗಳ 26 ನಿಗದಿತ ದಿನವಾಗಿದೆ.

    ಹಿಂದೂಸ್ಥಾನ್‌ ಝಿಂಕ್‌ ಲಿಮಿಟೆಡ್:

    ಈ ಕಂಪನಿಯು ಆಗಷ್ಟ್‌ 17 ರಂದು ಮಧ್ಯಂತರ ಲಾಭಾಂಶ ವಿತರಣೆ ಪರಿಶೀಲನೆಯ ಕಾರ್ಯಸೂಚಿ ಪ್ರಕಟಿಸಿದಾಗ ಷೇರಿನ ಬೆಲೆ ರೂ.332 ರ ಸಮೀಪವಿದ್ದು, ಲಾಭಾಂಶ ಪರಿಶೀಲನೆಯನ್ನು ಮುಂದೂಡಿದ ಕಾರಣ ಷೇರಿನ ಬೆಲೆ ರೂ.311 ರ ವರೆಗೂ ಇಳಿದು ನಂತರದ ದಿನಗಳಲ್ಲಿ ಪುಟಿದೆದ್ದಿತು. ಸೆಪ್ಟೆಂಬರ್‌ 14 ರಂದು ಮತ್ತೊಮ್ಮೆ ಏರಿಕೆಯಿಂದ ರೂ.338 ನ್ನು ತಲುಪಿ ಅಕ್ಟೋಬರ್‌ 1 ರಂದು ರೂ.306 ಕ್ಕೆ ಕುಸಿದು 18 ರಂದು ರೂ.407.90 ರ ವಾರ್ಷಿಕ ಗರಿಷ್ಠಕ್ಕೆ ಜಿಗಿದು ರೂ.387 ರ ಸಮೀಪದಲ್ಲಿ ಕೊನೆಗೊಂಡಿದೆ. ಈ ತಿಂಗಳ 22 ರಂದು ಕಂಪನಿಯು ತನ್ನ ತ್ರೈಮಾಸಿಕ ಫಲಿತಾಂಶ ಪ್ರಕಟಿಸಲಿದೆ. ಆದರೆ ಲಾಭಾಂಶದ ಬಗ್ಗೆ ಅಧಿಕೃತ ಪ್ರಕಟಣೆಯಿಲ್ಲ. ಕೇವಲ ಒಂದೆರಡು ತಿಂಗಳಲ್ಲಿ ಈ ಪರಿಯ ಏರಿಳಿತಗಳು ಪೇಟೆಯು ದಣಿದಿರುವುದರ ಸಂಕೇತವೇ ಎಂಬುದನ್ನು ಕಾದು ನೋಡಬೇಕಾಗಿದೆ.

    ಮೈಂಡ್‌ಟ್ರೀ, ಬಿ ಇ ಎಂ ಎಲ್‌, ಹಿಕಾಲ್‌, ಕಮ್ಮಿನ್ಸ್‌, ಐಟಿಸಿ, ತಿರುಮಲೈ ಕೆಮಿಕಲ್ಸ್‌, ಗುಡ್‌ಇಯರ್‌, ಹೆಚ್‌ಐ ಎಲ್‌, ಟಾಟಾ ಮೋಟಾರ್ಸ್‌, ಮದರ್ಸನ್‌ಸುಮಿ, ಲೌರಸ್‌ಲ್ಯಾಬ್‌, ದಿಲೀಪ್‌ಬ್ಯುಲ್ಡ್‌ಕಾನ್‌, ಮೆಟ್ರೋಪೊಲಿಸ್‌ಹೆಲ್ತ್‌ಕೇರ್‌, ಇಪ್ಕಾ ಲ್ಯಾಬ್ಸ್‌, ಗಳಂತಹ ಕಂಪನಿಗಳು ಈಚಿನ ದಿನಗಳಲ್ಲಿ ಅತೀವ ಏರಿಳಿತಗಳನ್ನು ಪ್ರದರ್ಶಿಸಿವೆ. ಇವು ಕೆಲವು ಕಂಪನಿಗಳಲ್ಲಿ ದೀರ್ಘಕಾಲೀನದಲ್ಲೂ ಲಾಭದ ಇಳುವರಿ ಒದಗಿಸದ ಮಟ್ಟದಲ್ಲಿ ಅಲ್ಪಕಾಲೀನದಲ್ಲೇ ಅಧಿಕ ಲಾಭ ಗಳಿಸಿಕೊಟ್ಟಿವೆ. ಇವು ಹೂಡಿಕೆದಾರರು ಹೂಡಿಕೆ ಎಂಬ ಚಕ್ರವ್ಯೂಹದೊಳಗೆ ಅಭಿಮನ್ಯುಗಳಾಗದೆ, ಅರ್ಜುನರಾಗಬೇಕೆಂದು ತಿಳಿಸುತ್ತಿದೆಯೇ ನೀವೇ ನಿರ್ಧರಿಸಿರಿ.

    ನೆನಪಿರಲಿ: ಉಳಿಸಿದ ಹಣ -ಗಳಿಸಿದ ಹಣ. ಈ ಅಂಕಣ ಷೇರು ಪೇಟೆಯ ಚಟುವಟಿಕೆಯಾಧರಿತ ಸುದ್ದಿ ವಿಶ್ಲೇಷಣೆ ಮಾತ್ರ . ಅಂತಿಮವಾಗಿ ಹೂಡಿಕೆ ನಿರ್ಧಾರ ಯಾವಾಗಲು ನಿಮ್ಮದೇ ಆಗಿರುತ್ತದೆ. ಅಂಕಣಕಾರರಾಗಲಿ ,ಕನ್ನಡಪ್ರೆಸ್ .ಕಾಮ್ ಆಗಲಿ ನಿಮ್ಮ ಹೂಡಿಕೆ ನಿರ್ಧಾರಗಳಿಗೆ ಜವಾಬ್ದಾರಿ ಆಗದು.

    MySugar:ಮೈಶುಗರ್ ಸಕ್ಕರೆ ಕಾರ್ಖಾನೆ ಲೀಸ್ ಗೆ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ;

    BENGALURU OCT 18

    ಮಂಡ್ಯದ -MANDYA_ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಲೀಸ್ ಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

    ಅವರು ಇಂದು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಂಡ್ಯದ ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

    ಮೈಶುಗರ್ ಗೆ ಒಬ್ಬ ಅನುಭವಿ ಹಿರಿಯ ತಜ್ಞರ ನೇತೃತ್ವದಲ್ಲಿ ಸಮಿತಿ ನೇಮಕ ಮಾಡಲಾಗುವುದು. ತಜ್ಞರ ಸಮಿತಿ ಮೂರು ತಿಂಗಳಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ ವರದಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರಮಗಳನ್ನು ವಹಿಸಲಾಗುವುದು.‌ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಯಂತ್ರೋಪಕರಣಗಳ ದುರಸ್ಥಿಗೆ ಆರ್ಥಿಕ ನೆರವು ನೀಡಲಾಗುವುದು. ಬರುವ ಹಂಗಾಮಿನಿಂದ ಕಬ್ಬು ನುರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

    ಕಾರ್ಖಾನೆ ಪುನರಾರಂಭಕ್ಕೆ ಅಗತ್ಯವಿರುವ ಹಣಕಾಸಿನ ವಿವರ ಹಾಗೂ ದುಡಿಯುವ ಬಂಡವಾಳ ಕುರಿತಂತೆ ಮಾಹಿತಿ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ಡಿಸ್ಟಿಲರಿ, ಎಥಿನಾಲ್, ಮೊಲ್ಯಾಸಿಸ್, ಕೊ-ಜನರೇಷನ್ ಮತ್ತಿತರ ಉಪ ಉತ್ಪನ್ನಗಳ ತಯಾರಿಕೆ ಪ್ರಾರಂಭಿಸುವ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ತಜ್ಞರು ನೀಡುವ ವರದಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲಾ ಅಂಶಗಳ ಕುರಿತು ಚರ್ಚಿಸಿ, ಒಪ್ಪಿಗೆ ಪಡೆದು ಮುಂದಿನ‌ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಸರ್ಕಾರಗಳು ಮೈಷುಗರ್ ಪುನಶ್ಚೇತನಕ್ಕೆ ಸಾಕಷ್ಟು ವ್ಯಯಿಸಿದ್ದರೂ ಯಶಸ್ಸು ದೊರೆತಿಲ್ಲ. ಕಳೆದ ಮೂರು ವರ್ಷದಿಂದ ಫ್ಯಾಕ್ಟರಿ ಬಂದ್ ಕಬ್ಬು ಬೆಳೆಗಾರರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ ಆರ್ ಓ ಟಿ ಮೂಲಕ ನಡೆಸಲು ತೀರ್ಮಾನಿಸಿತ್ತು. ಆದರೆ ರೈತರು, ಜನಪ್ರತಿನಿಧಿಗಳು ಇದನ್ನು ವಿರೋಧಿಸಿದ್ದಾರೆ. ಹಾಗಾದರೆ ಮೈಷುಗರ್ ಪುನಶ್ಚೇತನಕ್ಕೆ ಮುಂದಿನ ನಡೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

    ಕಾರ್ಖಾನೆ ಪ್ರಾರಂಭಿಸಬೇಕು ಎನ್ನುವುದು ಸರ್ಕಾರದ ಆಶಯ. ಕಬ್ಬಿನ ಮೌಲ್ಯವರ್ಧನೆಗಾಗಿ ಸ್ಥಾಪಿಸಿದ ಕಾರ್ಖಾನೆ ಇದು. ರೈತರ ಕಬ್ಬಿಗೆ ನಿಗದಿತ ಸಮಯದಲ್ಲಿ ಹಣಪಾವತಿ ಮಾಡಿದರೆ, ಲಾಭ ಎನ್ನುವುದು ನನ್ನ ಭಾವನೆ ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.

    ಮುಂದಿನ ಮೂರು ತಿಂಗಳಲ್ಲಿ ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುವುದು. ವ್ಯವಸ್ಥೆಯಲ್ಲಿ ಲೋಪದೋಷ ಸರಿ ಪಡಿಸಿ, ಒಮ್ಮೆ ಪ್ರಾಯೋಗಿಕವಾಗಿ ನಡೆಸಲು ಸಿದ್ಧರಿದ್ದೇವೆ. ಆದರೆ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು..

    ಸಚಿವರಾದ ಜೆ.ಸಿ. ಮಾಧುಸ್ವಾಮಿ, ನಾರಾಯಣಗೌಡ, ಶಂಕರ ಪಾಟೀಲ ಮುನೇನಕೊಪ್ಪ, ಎಸ್ ಟಿ ಸೋಮಶೇಖರ್, ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಜಿಲ್ಲೆಯ ಶಾಸಕರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರೈತ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್:Master Plan to Streamline Bengaluru’s Drainage System

    BENGALURU OCT 18:
    ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ,-madiwala- ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್-silk board junction- ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

    ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

    ಅಗರ-agara lake- ಸುತ್ತುಲಿನ ಬಡಾವಣೆಗಳಿಗೆ ಪ್ರತ್ಯೇಕ ಚರಂಡಿ ನಿರ್ಮಾಣ ಕಾರ್ಯವನ್ನು 4-5 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಒಳಚರಂಡಿ ಹಾಗೂ ಕೊಳಚೆ ನೀರನ್ನು ಪ್ರತ್ಯೇಕ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

    ಬಡಾವಣೆಗಳಲ್ಲಿ ಯು.ಜಿ.ಡಿ ಲೆವೆಲ್ ಗಳಲ್ಲಿ ವ್ಯತ್ಯಾಸ ಉಂಟಾಗಿದ್ದು, ಅದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ. ಅಗರ ಎಸ್.ಟಿ.ಪಿ ಘಟಕದ ಸಾಮರ್ಥ್ಯ 35 ಎಂ.ಎಲ್‌ಡಿ ಇದ್ದರೂ ಕೇವಲ 25 ಎಂ.ಎಲ್.ಡಿ ನೀರನ್ನು ಸಂಸ್ಕರಿಸುತ್ತಿದೆ. ಪರಿಶೀಲನೆ ವೇಳೆಯಲ್ಲಿ ಸಂಸ್ಕರಿತ ನೀರೂ ಸಹ ಚರಂಡಿಗೆ ಸೇರುತ್ತಿರುವುದನ್ನು ಗಮನಿಸಿದ್ದು, ತಕ್ಷಣವೇ ಇದನ್ನು ಸರಿಪಡಿಸಿ, ನೇರವಾಗಿ ಕೆರೆಗಳಿಗೆ ಹರಿಸಬೇಕೆಂದು ಈಗಾಗಲೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

    ಮಡಿವಾಳ ಕೆರೆಗೆ ಹೊಂದಿಕೊಂಡಂತೆ ಇರುವ 4 ಎಂ.ಎಲ್.ಡಿ ಎಸ್.ಟಿ.ಪಿ ಘಟಕ ಕಾರ್ಯಾರಂಭ ಮಾಡಿಲ್ಲ. 4-5 ತಿಂಗಳ ಅವಧಿಯಲ್ಲಿ ಅದು ಕೂಡ ಸಂಪೂರ್ಣವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದರು.

    ಸಮನ್ವಯ
    ಬಿ.ಬಿ.ಎಂ.ಪಿ, ಬೆಸ್ಕಾಂ, ಬಿ.ಡಬ್ಲೂ ಎಸ್.ಎಸ್.ಬಿ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.

    ಗುಂಡಿ ಮುಚ್ಚಲು ಕ್ರಮ
    ಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು, ಪರಿಶೀಲಿಸಲಾಗುವುದು. ಸತತ ಮಳೆಯಿಂದಾಗಿ ದುರಸ್ಥಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮವಹಿಸಲಾಗುವುದು ಎಂದರು.

    ಶಾಸಕ ಸತೀಶ್ ರೆಡ್ಡಿ, ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

    DUBAI EXPO:ರಾಜ್ಯದಲ್ಲಿ ನವೋದ್ಯಮಗಳಿಗೆ ಹೇರಳ ಅವಕಾಶ: ದುಬೈ ಎಕ್ಸ್ ಪೋ’ದಲ್ಲಿಐಟಿ-ಬಿಟಿ ಸಚಿವರ ಮಾತು, ಹೂಡಿಕೆಗೆ ಆಹ್ವಾನ

    DUBAI OCT 18

    `ಇಡೀ ಏಷ್ಯಾ ಖಂಡದ `ಸ್ಟಾರ್ಟ್ ಅಪ್ ರಾಜಧಾನಿ’ಯಾಗಿರುವ ಕರ್ನಾಟಕವು ಮುಂಬರುವ ದಿನಗಳಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ಆರೋಗ್ಯ ತಂತ್ರಜ್ಞಾನ ಕ್ಷೇತ್ರಗಳಲ್ಲೂ ಅಗ್ರಸ್ಥಾನವನ್ನು ಪಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಇಲ್ಲಿ ನಡೆಯುತ್ತಿರುವ ವರ್ಲ್ಡ್ ದುಬೈ ಎಕ್ಸ್ ಪೊ-2020’ರಲ್ಲಿ ಭಾಗವಹಿಸಿರುವ ಅವರು ಸೋಮವಾರಕರ್ನಾಟಕವು ಏಷ್ಯಾದ ಸ್ಟಾರ್ಟಪ್ ರಾಜಧಾನಿಯಾಗಿದ್ದು ಹೇಗೆ?’ ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

    ಕರ್ನಾಟಕವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ನವೋದ್ಯಮಗಳಿಂದ ಗಮನ ಸೆಳೆದಿದ್ದು, ಈ ವರ್ಷದ ಮೊದಲ 6 ತಿಂಗಳಲ್ಲಿ 17.2 ಶತಕೋಟಿ ಡಾಲರುಗಳಷ್ಟು ಶೋಧನಾ ಬಂಡವಾಳ (ವೆಂಚರ್ ಕ್ಯಾಪಿಟಲ್) ಹೂಡಿಕೆಯಾಗಿದೆ. ರಾಜ್ಯ ಸರಕಾರದ ಉತ್ಸಾಹ ಮತ್ತು ಉದ್ಯಮಸ್ನೇಹಿ ನೀತಿಗಳಿಂದಾಗಿ `ಡಿಜಿಟಲ್ ಇಂಡಿಯಾ’ ಕನಸು ನನಸಾಗುತ್ತಿದೆ ಎಂದು ಅವರು ಹೇಳಿದರು.

    ಕೋವಿಡ್ ಬಿಕ್ಕಟ್ಟಿನ ಕಾಲದಲ್ಲಿ ನಮ್ಮ ತಂತ್ರಜ್ಞಾನವು ಅಗಾಧವಾಗಿ ನೆರವಿಗೆ ಬಂತು. 2021ರಲ್ಲಿ ರಾಜ್ಯದ 8 ಸ್ಟಾರ್ಟಪ್ ಗಳು ತಲಾ 100 ಕೋಟಿ ಡಾಲರ್ ಮೌಲ್ಯದ ಕಂಪನಿಗಳಾಗಿ ಬೆಳೆದಿದ್ದು ಯೂನಿಕಾರ್ನ್ ಸ್ಥಾನಮಾನವನ್ನು ಗಳಿಸಿಕೊಂಡಿವೆ. ಇದರ ಜೊತೆಗೆ ಇವು ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ ಎಂದು ಸಚಿವರು ಶ್ಲಾಘಿಸಿದರು.

    ರಾಜ್ಯ ಸರಕಾರವು ತನ್ನ ಎಲಿವೇಟ್’ ನೀತಿಯ ಮೂಲಕ ಹೊಸ ಬಗೆಯ ನವೋದ್ಯಮಗಳಿಗೆ ಸಂಪೂರ್ಣ ಉತ್ತೇಜನ ನೀಡುತ್ತಿದೆ. ನಗರಾಭಿವೃದ್ಧಿ, ಆರೋಗ್ಯ ಸೇವೆ, ಆಹಾರ ಭದ್ರತೆ, ಸ್ವಚ್ಛ ಪರಿಸರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನವೋದ್ಯಮಗಳನ್ನು ಬೆಳೆಸಲುಗ್ರ್ಯಾಂಡ್ ಚಾಲೆಂಜಸ್ ಕರ್ನಾಟಕ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ನೆರೆದಿದ್ದ ಹೂಡಿಕೆದಾರರಿಗೆ ತಿಳಿಸಿದರು.

    ಅಲ್ಲದೆ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿನಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಉದ್ಯಮಿಗಳ ಆಯ್ದ 75 ನವೋದ್ಯಮಗಳಿಗೆ ಮೂಲನಿಧಿಯಿಂದ ಹಿಡಿದು ಸಂಪೂರ್ಣ ಬೆಂಬಲ ಕೊಡಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

    ಭವಿಷ್ಯದ ನಿರ್ಣಾಯಕ ತಂತ್ರಜ್ಞಾನಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ರೋಬೋಟಿಕ್ಸ್, ಡೇಟಾ ಸೈನ್ಸ್, ಸೈಬರ್ ಸೆಕ್ಯುರಿಟಿ ಮುಂತಾದವುಗಳಿಗೆ ಪ್ರೋತ್ಸಾಹ ನೀಡಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದೆಲ್ಲೆಡೆ ಉತ್ಕೃಷ್ಟತಾ ಕೇಂದ್ರಗಳು, ಅಗತ್ಯ ಸೌಲಭ್ಯಗಳು ಮತ್ತು ಪರಿಪೋಷಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ ಪ್ರಕಾಶ, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ನಿರ್ದೇಶಕಿ‌ ಮೀನಾ ನಾಗರಾಜ ಹಾಜರಿದ್ದರು.

    IBPS-ಬ್ಯಾಂಕ್ ಕ್ಲರಿಕಲ್ ಹುದ್ದೆಗೆ ಅರ್ಜಿ ಆಹ್ವಾನ ; ಈ ಬಾರಿ ಕನ್ನಡದಲ್ಲೂ ಬರೆಯಬಹುದು ಪರೀಕ್ಷೆ

    ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಹುದ್ದೆಗಳಿಗೆ ನೇಮಕ ಮಾಡುವಾಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸಬೇಕೆಂಬ ಕನ್ನಡಿಗರ ಒತ್ತಡಕ್ಕೆ ಕೊನೆಗೂ ಮಣಿದಿರುವ ಕೇಂದ್ರ ಸರಕಾರ ಈ ಸಂಬಂಧ  ಆದೇಶ ಹೊರಡಿಸಿದೆ.

    ಇದರಿಂದಾಗಿ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಸೇರಿದಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಹುದ್ದೆಗಳಿಗೆ ನೇಮಕ ನಡೆಯುವಾಗ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರವಲ್ಲದೆ, ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಇನ್ನು ಮುಂದೆ ಪರೀಕ್ಷೆ ನಡೆಸಲಾಗುತ್ತದೆ.

    ಈ ಸಂಬಂಧ ಪರಿಶೀಲನೆ ನಡೆಸಲು ಕೇಂದ್ರ ಹಣಕಾಸು ಸಚಿವಾಲಯವು ನೇಮಿಸಿದ್ದ ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ಈಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದುವರೆಗೆ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿ ಪರೀಕ್ಷೆಗಳು ಮಾತ್ರ ಸ್ಥಳೀಯ ಭಾಷೆಯಲ್ಲಿ ನಡೆಯುತ್ತಿದ್ದವು. ಈಗ ರಾಷ್ಟ್ರೀಕೃತ ಬ್ಯಾಂಕ್‌ಗಳೂ ಇದೇ ನಿಯಮಗಳನ್ನು ಪಾಲಿಸಬೇಕು. ಬ್ಯಾಂಕ್ ಸಿಬ್ಬಂದಿ ನೇಮಕಾತಿ  ಸಂಸ್ಥೆ (IBPS) ಸ್ಥಗಿತ ಗೊಳಿಸಿದ್ದ ಕ್ಲರ್ಕ್ ಹುದ್ದೆಗಳ ನೇಮಕಾತಿ ಮುಂದುವರಿಸಲು ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಯಲ್ಲಿ ನಡೆಸಲು ಸೂಚಿಸಿದೆ. ಉಳಿದಂತೆ ಹಿಂದಿನ ನಿಯಮಗಳೇ ಅನ್ವಯವಾಗಲಿವೆ. ಹೀಗಾಗಿ ಕಳೆದ ಜುಲೈನಲ್ಲಿ 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಹೊರಡಿಸಿದ್ದ ಅಧಿಸೂಚನೆ ಯಂತೆಯೇ ನೇಮಕ ಪ್ರಕ್ರಿಯೆ ಮುಂದುವರಿಯಲಿದೆ.

    ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ  ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು  7,855 ಹುದ್ದೆಗಳಿಗೆ  ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 454 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ  12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಯಲಿದೆ. ಅಧಿಸೂಚನೆಯ ಪ್ರಕಾರ ರಾಜ್ಯದ ಲ್ಲಿಯೇ 454 ಕ್ಲರ್ಕ್ ಹುದ್ದೆಗಳಿವೆ.

    ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?

    ಕೆನರಾ ಬ್ಯಾಂಕ್ 140,  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 209, ಯೂಕೋ ಬ್ಯಾಂಕ್10, ಪಂಜಾಬ್ & ಸಿಂಧ್ ಬ್ಯಾಂಕ್ 3,ಇಂಡಿಯನ್ ಓವರ್ಸೀಸ್ ಬ್ಯಾಂಕ್ 28, ಇಂಡಿಯನ್ ಬ್ಯಾಂಕ್ 40, ಸೆಂಟ್ರಲ್ ಬ್ಯಾಂಕ್ ಆಪ್ ಇಂಡಿಯಾ 5, ಬ್ಯಾಂಕ್ ಆಪ್ ಮಹಾರಾಷ್ಟ್ರ 7, ಬ್ಯಾಂಕ್ ಆಫ್ ಇಂಡಿಯಾ 7 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.ಇದರ ಬೆನ್ನಲ್ಲೇ ಸಾಲು-ಸಾಲಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ.

    ಸಹಜ ಆತಂಕ

    ಸಾಮಾನ್ಯವಾಗಿ ಪದವಿ ಮುಗಿಸಿದ ಅಭ್ಯರ್ಥಿಗಳು ಮೊದಲ ಬಾರಿಗೆ ಈ ಪರೀಕ್ಷೆಗಳನ್ನು ಎದುರಿಸುವಾಗ ಸಹಜವಾಗಿಯೇ ಆತಂಕಗಳು ಎದುರಾಗಿರುತ್ತವೆ. ಇರುವ  454 ಹುದ್ದೆಗಳಿಗೆ ಲಕ್ಷಗಟ್ಟಲೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವಾಗ ನನಗೆ ಈ ಹುದ್ದೆಯನ್ನ ಪಡೆಯಲು ಸಾದ್ಯವೇ….? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನ ಕಾಡುತ್ತಿರುತ್ತದೆ. ಇದು ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೊದಲ ಬಾರಿಗೆ ಬರೆಯುವವರಿಗೆ ಕಾಡುವ ಮಿಲಿಯನ್ ಡಾಲರ್ ಪ್ರಶ್ನೆ. ಇದು ಸಹಜ, ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೂ ಹೀಗೆ ಅನ್ನಿಸಿದ್ದರೆ ಆಶ್ಚರ್ಯವಿಲ್ಲ. ಬ್ಯಾಂಕ್ ಕೆಲಸವೆಂದರೆ ಅತ್ಯಂತ ಪ್ರತಿಷ್ಠಿತ ಕೆಲಸವೆಂದೇ ಜನಜನಿತ. ಹೀಗಾಗಿಯೇ ಒಂದು ಹುದ್ದೆ ಖಾಲಿ ಇದ್ದರೂ ಸಾವಿರಾರು ಮಂದಿ ಅರ್ಜಿ ಸಲ್ಲಿಸುತ್ತಾರೆ. ಯಾವುದೇ ಅಧಿಸೂಚನೆ ಪ್ರಕಟವಾದಾಗ ಅರ್ಜಿ ಸಲ್ಲಿಸಿದ ಲಕ್ಷಾಂತರ ಅಭ್ಯರ್ಥಿಗಳಲ್ಲಿ ಕೆಲವೇ ಕೆಲವು ಸಾವಿರ ಜನ  ಮಾತ್ರ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತಾರೆ

    ಅರ್ಹತೆ ಏನು?:

    ಅಂಗೀಕೃತ ವಿಶ್ವವಿದ್ಯಾನಿಲಯ ದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಪರೀಕ್ಷೆ ಬರೆಯಬಹುದು, ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಗೆ ಸರಿಸಮನಾದ ಕೋಸ್೯ ಮಾಡಿದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಯು ಕಂಪ್ಯೂಟರ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ, ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯುಹೊಂದಿರಬೇಕಾಗುತ್ತದೆ.(ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ(Information Technology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು.

    ಗಮನಿಸಿ: ಪದವಿ ಪೂರ್ಣಗೊಳಿಸಿ ದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

    ವಯೋಮಿತಿ:

    20 ವರ್ಷದಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    (ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.)

    ಗಮನಿಸಿ:ಜುಲೈ 12-14, 2021 ರ ಅವಧಿಯಲ್ಲಿ ಈ ಗುಮಾಸ್ತ ಹುದ್ದೆಯ ಪ್ರಕ್ರಿಯೆಗೆ ಈಗಾಗಲೇ ಯಶಸ್ವಿಯಾಗಿ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಇನ್ನೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅವರ ಹಿಂದಿನ ಅರ್ಜಿಯನ್ನು ಮುಂದಿನ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದು.

    ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಆದ್ಯತೆಯ ಆದೇಶವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು.

    ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ.ಒಮ್ಮೆ ನೀವು ಆಯ್ಕೆಯಾದರೆ ಬ್ಯಾಂಕ್ ಬದಲಾವಣೆಗೆ ಯಾವುದೇ ವಿನಂತಿಯನ್ನು ನಂತರದ ದಿನಗಳಲ್ಲಿಪರಿಗಣಿಸಲಾಗುವುದಿಲ್ಲ.

    ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್‌ಮೆಂಟ್‌ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹ ದಲ್ಲಿ  ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

    ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕ:

    07-10-2021 ರಿಂದ 27-10-2021.

    ಪ್ರಿಲಿಮ್ಸ್ ನಡೆಯುವ ದಿನಾಂಕ: ಡಿಸೆಂಬರ್-2021.

    ಪ್ರಿಲಿಮ್ಸ್ ಫಲಿತಾಂಶ: ಡಿಸೆಂಬರ್ 2021/ಜನವರಿ, 2022.

    ಮುಖ್ಯ ಪರೀಕ್ಷೆ ನಡೆಯುವ ದಿನಾಂಕ: ಜನವರಿ/ಫೆಬ್ರವರಿ 2022,

    ಪ್ರಿಲಿಮ್ಸ್‌ ನಡೆಯುವ ಕೇಂದ್ರಗಳು :

    ಬೆಳಗಾವಿ, ಬೆಂಗಳೂರು, ಬೀದರ್, ಕಲಬುರಗಿ, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಹಾಸನ, ಮಂಗಳೂರು,  ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

    ಮೇನ್ಸ್ ನಡೆಯುವ ಕೇಂದ್ರಗಳು: ಬೆಂಗಳೂರು  ಹುಬ್ಬಳ್ಳಿ, ಮತ್ತು ಮಂಗಳೂರು.

    ಅರ್ಜಿ ಶುಲ್ಕ:

    850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ [inclusive of GST](ಎಸ್‌ಸಿ/ಎಸ್‌ಟಿ/PWBD/ EXSM ಅಭ್ಯರ್ಥಿಗಳಿಗೆ 175 ರೂ.[ inclusive of GST]

    ಆನ್ಲೈನ್ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.

    ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ  OBC ಪ್ರಮಾಣಪತ್ರವನ್ನು ಹೊಂದಿರಬೇಕು.

    ಅಧಿಸೂಚನೆಯಲಿಂಕ್‌:  https://www.ibps.in/wp-content/uploads/Advt-_CRP-Xl

    ಹೆಚ್ಚಿನಮಾಹಿತಿಗೆವೆಬ್:  https://www.ibps.in/

    ಪರೀಕ್ಷೆ ಹೇಗೆ :

    ಬ್ಯಾಂಕಿಂಗ್ ಪರೀಕ್ಷೆಗಳು IAS ಹಾಗೂ KAS ಮಾದರಿಯಲ್ಲಿ ಎರಡು ಹಂತಗಳಲ್ಲಿ ನಡೆಯಲಿವೆ. ಪೂರ್ವಭಾವಿ (prelims), ಮುಖ್ಯ ಪರೀಕ್ಷೆ (mains). ಐಬಿಪಿಎಸ್‌ ನ ಗುಮಾಸ್ತರ  ಹುದ್ದೆಗೆ ಸಂದರ್ಶನ ಇರುವುದಿಲ್ಲ. ಪೂರ್ವಭಾವಿ ಪರೀಕ್ಷೆ ಮೊದಲ ಹಂತದ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ಅಭ್ಯರ್ಥಿಗಳನ್ನು 1:20 ರಂತೆ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

    ಪೂರ್ವಭಾವಿಯಲ್ಲಿ  ಪಡೆದ ಅಂಕಗಳು ಅರ್ಹತಾ ಪಟ್ಟಿಗೆ ಮಾತ್ರ ಮೀಸಲಾಗಿದ್ದು ಅದರಲ್ಲಿ ಪಡೆದ ಅಂಕಗಳನ್ನು ಮುಂದೆ ಪರಿಗಣಿಸಲಾಗುವುದಿಲ್ಲ. ಎರಡೂ ಪರೀಕ್ಷೆಗೂ ಅಷ್ಟೆ ಮಹತ್ವ ನೀಡಬೇಕು ಎಂಬುದನ್ನು ಖಂಡಿತಾ ಮರೆಯದಿರಿ.

    ನಿಗದಿತ ದಿನದಂದು ಆನ್ ಲೈನ್‌ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ  20 ನಿಮಿಷಗಳಂತೆ  ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿಯಾಗಿರುತ್ತದೆ ) ಇದರಲ್ಲಿ ಇಂಗ್ಲೀಷ್ ಲಾಂಗ್ವೇಜಗೆ 30, ನ್ಯೂಮರಿಕಲ್ ಎಬಿಲಿಟಿಯ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆ ಯಲ್ಲೂ ಕನಿಷ್ಟ ಅಂಕ ಗಳಿಸುವದರ ಜೊತೆಯಲ್ಲಿ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ. ಇಂಗ್ಲೀಷ್ ಹೊರತುಪಡಿಸಿ ಉಳಿದ ಎರಡು ಪ್ರಶ್ನೆ ಪತ್ರಿಕೆಗಳು ಕನ್ನಡ,ಕೊಂಕಣಿ, ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಲಭ್ಯವಿದೆ.ಇದು ಈ ಸಲದ ಬಹು ಮುಖ್ಯ ಬದಲಾವಣೆಯಾಗಿದೆ.

    ಮುಖ್ಯ ಪರೀಕ್ಷೆಯು ಎರಡು ಗಂಟೆ 40 ನಿಮಿಷಗಳ ಕಾಲ ನಡೆಯಲಿದ್ದು, 190 ಪ್ರಶ್ನೆಗಳನ್ನು  200 ಅಂಕಗಳಿಗೆ ಬಿಡಿಸಬೇಕು.

    1.General/ Financial Awareness 50 ಪ್ರಶ್ನೆ 50 ಅಂಕಗಳು 35 ನಿಮಿಷಗಳು.

    2.General English 40 ಪ್ರಶ್ನೆ 40 ಅಂಕಗಳು 35 ನಿಮಿಷಗಳು.

    3.Reasoning Ability & Computer Aptitude  50 ಪ್ರಶ್ನೆ 60 ಅಂಕಗಳು 45 ನಿಮಿಷಗಳು.

    4.Quantitative Aptitude 50ಪ್ರಶ್ನೆ 50 ಅಂಕಗಳು 45 ನಿಮಿಷಗಳು.

    ಹೀಗೆ ಒಟ್ಟಾರೆ 190 ಪ್ರಶ್ನೆಗಳಿದ್ದು 200 ಅಂಕಗಳು ಹಾಗೂ 160 ನಿಮಿಷದ ಪರೀಕ್ಷೆ ಯಾಗಿದೆ.

    ಇಂಗ್ಲಿಷ್ ಭಾಷೆಯೊಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್,ಹಿಂದಿ,ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲಿ ಇರುತ್ತದೆ.ಇದು ಈ ಸಲದ ಬಹು ಮುಖ್ಯ ಬದಲಾವಣೆಯಾಗಿದೆ. ಆದರೆ ಬ್ಯಾಂಕ್ ಪರೀಕ್ಷೆಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಗುರುತಿಸಬೇಕಿರುತ್ತದೆ. ಅಲ್ಲದೆ ಬಿಡಿಸಿದ ಪ್ರಶ್ನೆಗಳಿಗೆ ಉತ್ತರ ಸರಿಯಾಗಿರಲೇಬೇಕಾದುದು ಬಹಳ  ಮುಖ್ಯವಾಗಿರುತ್ತದೆ. ಏಕೆಂದರೆ ಬ್ಯಾಂಕ್ ಪರೀಕ್ಷೆಗಳಲ್ಲಿ ನೆಗೆಟಿವ್ ಮಾಕ್ಸ್  (ಋಣಾತ್ಮಕ ಮೌಲ್ಯಮಾಪನ) ಇರುತ್ತದೆ. ಪದವಿ ಪರೀಕ್ಷೆಗಳಲ್ಲಿ ಇ ರೀತಿಯಾಗಿ ಇರೋದಿಲ್ಲ. ಹಾಗಾಗಿ ಋಣಾತ್ಮಕ ಮೌಲ್ಯಮಾಪನದ ಕುರಿತಂತೆ ಧನಾತ್ಮಕ ಚಿಂತನೆ ಇರಬೇಕಾದುದು ಮೊದಲ ಆದ್ಯತೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ಗಳಲ್ಲಿ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು (ಋಣಾತ್ಮಕ ಅಂಕ) ಕಳೆಯಲಾಗುತ್ತದೆ.

    ಪರೀಕ್ಷೆಯಲ್ಲಿ ನೀವು ಯಶಸ್ವಿಯಾಗಬೇಕಾದರೆ ಎಲ್ಲವನ್ನೂ ಉತ್ತರಿಸಲು ಹೋಗದೆ ಗೊತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರವನ್ನು ಗುರುತಿಸಿದರೆ ಸಾಕು. ಅತ್ಯಂತ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ನಿಖರವಾಗಿ ಗೊತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರಿಸಬೇಕಾದುದು ಅಗತ್ಯ.

    ಬಾರಿಯ ಬದಲಾವಣೆಗಳೇನು?:

    ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಕೆಲವು ಬದಲಾವಣೆಗಳು ಸಾಮಾನ್ಯ. ಹಾಗೆಯೇ ಈ ಬಾರಿಯ ಬದಲಾವಣೆಗಳು ಕೆಳಗಿನಂತಿವೆ:

    ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ನೀವು ತರುವ ಐಡಿ ಪ್ರೂಫ್‌ನ ಸಂಖ್ಯೆ ನೀಡುವುದು ಕಡ್ಡಾಯ ಹಾಗೂ ಅದು ನೀವು ಅರ್ಜಿ ಸಲ್ಲಿಸಿದ ಹೆಸರಿನೊಂದಿಗೆ ಹೊಂದಾಣಿಕೆಯಾಗಿರಬೇಕು. ಈ ಬಾರಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಾಗಿ ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳುವ ಅಗತ್ಯವಿದೆ. ಮೇನ್ಸ್ ಪರೀಕ್ಷೆಗೆ ಅರ್ಹಗೊಂಡ ಅಭ್ಯರ್ಥಿಗಳು ಮೇನ್ಸ್ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನು ಕೂಡ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಬಹುದು. ಕನಿಷ್ಟ 8 ಭಾವಚಿತ್ರವನ್ನು (ಅಭ್ಯರ್ಥಿಯು ಕಾಲ್-ಲೆಟರ್‌ನಲ್ಲಿ ಅಂಟಿಸಿದಂತೆಯೇ) ಹಾಗೂ  ಪ್ರಿಲಿಮ್ಸ್ ಹಾಗೂ ಮೇನ್ಸ್ ನ ಕರೆ ಪತ್ರದ  ಝೆರಾಕ್ಸ ಪ್ರತಿಯನ್ನು ಅಥವಾ ಹೆಚ್ಚುವರಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ. ಕೊನೆಯಲ್ಲಿ ಅದರ ಪ್ರತಿಯನ್ನು ಬ್ಯಾಂಕ್ ಗಳಿಗೆ ಸೇರುವಾಗ ನೀಡಬೇಕು ಎಂಬುದನ್ನು ಮರೆಯಬೇಡಿ.

    ನಂತರದ ದಿನಗಳಲ್ಲಿ ವೆಬ್ ಸೈಟ್ ನಲ್ಲಿ ಸಿಗುವುದಿಲ್ಲ.

    ಅಭ್ಯರ್ಥಿಗಳು ಒಂದು ಹೆಚ್ಚುವರಿ ಛಾಯಾಚಿತ್ರವನ್ನು (ಅಭ್ಯರ್ಥಿಯು ಕಾಲ್ ಲೆಟರ್‌ನಲ್ಲಿ ಅಂಟಿಸಿದಂತೆಯೇ) ಜೊತೆಗೆ ಕರೆ ಪತ್ರ ಮತ್ತು ಇತರ ಅಗತ್ಯ ದಾಖಲೆಗಳೊಂದಿಗೆ “ಮಾಹಿತಿ ಕೈಪಿಡಿ” ಮತ್ತು ಕರೆ ಪತ್ರದಲ್ಲಿ ಸೂಚಿಸಿದ ಮಾಹಿತಿಯಂತೆ ತೆಗೆದುಕೊಂಡು ಹೋಗಬೇಕು.

    ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ನೋಂದಣಿ:

    ಎ.ಅಭ್ಯರ್ಥಿಗಳ ನೋಂದಣಿಯನ್ನು ಫೋಟೋ ಕ್ಯಾಪ್ಚರ್ ಮೂಲಕ ಮಾಡಲಾಗುವುದು.

    ಬಿ.ಅಭ್ಯರ್ಥಿಯನ್ನು ಪರೀಕ್ಷಾ ಕೇಂದ್ರದಲ್ಲಿ ನಿಲ್ಲಿಸಿ ಛಾಯಾಚಿತ್ರ ತೆಗೆಯಲಾಗುವುದು.

    ಸಿ. ಅಭ್ಯರ್ಥಿಗಳಿಗೆ ಸೀಟ್ ನಂಬರ್ ನೀಡಲಾಗುತ್ತದೆ.

    ಡಿ. ರಫ್ ಶೀಟ್,(ಗಳನ್ನು) ಪ್ರತಿ ಕ್ಯಾಂಡಿಡೇಟ್ ಡೆಸ್ಕ್ ನಲ್ಲಿ ಇರಿಸಲಾಗಿರುತ್ತದೆ. ಪರೀಕ್ಷೆಯ ಕೊನೆಯಲ್ಲಿ ಅಭ್ಯರ್ಥಿಗಳಿಗೆ  ಸೂಚಿಸಿದಂತೆ ನಿಗದಿತ ಡ್ರಾಪ್ ಬಾಕ್ಸ್‌ನಲ್ಲಿ ರಫ್ ಶೀಟಗಳನ್ನು ಹಿಂತಿರುಗಿಸಬೇಕು.

    ಮುಖ್ಯ ಪರೀಕ್ಷೆಗೆ  ಸ್ಟ್ಯಾಂಪ್ ಮಾಡಿದ ಫೋಟೊ ಕಾಪಿ ಯನ್ನು ತರದೇ ಇರುವ ಅಭ್ಯರ್ಥಿಗಳನ್ನು ಪರೀಕ್ಷೆಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ.

    TIPS:

    ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐ ಬಿ ಪಿ ಎಸ್) ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವವರು ಗಮನಿಸಲೇಬೇಕಾದ ವಿಷಯಗಳ ಮಾಹಿತಿ ಇಲ್ಲಿದೆ:

    ಐಬಿಪಿಎಸ್ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇದನ್ನು ಬಿಟ್ಟು ಬೇರೆ ವಿಧಾನದಲ್ಲಿ ಅರ್ಜಿ ಸಲ್ಲಿಸಿದರೆ ಸ್ವೀಕರಿಸಲಾಗುವುದಿಲ್ಲ.

    ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿ ಮತ್ತು ವಿದ್ಯಾರ್ಹತೆಯನ್ನು ಸರಿಯಾಗಿ ಗಮನಿಸಿಕೊಳ್ಳಿ.

    ಪರೀಕ್ಷಾ ಅಧಿಸೂಚನೆಯ ಮದ ಅನುಬಂಧ-II [Annexure-il]ರಲ್ಲಿ ಹೇಳಿರುವಂತೆ ನಿಮ್ಮ ಭಾವಚಿತ್ರ ಹಾಗೂ ಸಹಿಯನ್ನು ಮೊದಲೇ ಸ್ಕ್ಯಾನ್ ಮಾಡಿ, ಜಿಪಿಜಿ ಫಾರ್ಮೆಟ್‌ನಲ್ಲಿ ಸೇವ್ ಮಾಡಿಟ್ಟುಕೊಳ್ಳಿ.

    ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ, ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ  ಮಾಡಿಕೊಳ್ಳಿ.

    ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ. ಏಕೆಂದರೆ, ಐಬಿಪಿಎಸ್ ಸಂಸ್ಥೆ ಸಂದರ್ಶನ ಪತ್ರ/ಪರೀಕ್ಷಾ ಸೂಚನ ಪತ್ರ ಹಾಗೂ ಇತರೆ ಮಾಹಿತಿಗಳನ್ನು ವಿಶೇಷ ಸಂದರ್ಭಗಳಲ್ಲಿ ಇ-ಮೇಲ್ ಐ.ಡಿ.ಗೆ ಕಳುಹಿಸುತ್ತದೆ.

    ಐಬಿಪಿಎಸ್ ಸಂಸ್ಥೆಯ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿಟ್ಟುಕೊಂಡು, ಅದರಂತೆ ಮೇಲ್ ಚೆಕ್ ಮಾಡಲು ಮರೆಯಬೇಡಿ, ಯಾವುದೇ ಕಾರಣಕ್ಕೂ ನಿಮ್ಮ ಇ-ಮೇಲ್ ಐ.ಡಿ.ಯನ್ನು ಇತರರೊಂದಿಗೆ ಹಂಚಿಕೊಳ್ಳಬೇಡಿ.

    ಆನ್ ಲೈನ್ ಅಪ್ಲಿಕೇಷನ್ ಸಲ್ಲಿಸುವಾಗ save and next – ಅಪ್ಪನ್ ಅನ್ನೇ ಬಳಸಿ ಕೊನೆಯಲ್ಲಿ final submit ಬಟನ್ ಒತ್ತುವ ಮುನ್ನ ಏನಾದರೂ ಡೀಟೇಲ್ ಅನ್ನು ಬದಲಿಸಬೇಕಾದರೆ preview ನಲ್ಲಿ ನೋಡಿ ಬದಲಿಸಲು ಅವಕಾಶವಿದೆ. ಆದರೆ ಯಾವುದೇ ಕಾರಣಕ್ಕೂ ಅಭ್ಯರ್ಥಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್‌ ನಂಬರ್‌, ಇ-ಮೇಲ್ ಐ.ಡಿ.ಯಂತಹ basic ಮಾಹಿತಿಯನ್ನು ಬದಲಾಯಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ಮಾಹಿತಿಯನ್ನು ಭರ್ತಿ ಮಾಡುವಾಗ ಎಚ್ಚರಿಕೆಯಿಂದಿರಿ.

    ನಿಮ್ಮ ಐ.ಡಿ. ಪ್ರೊಫ್‌ನಲ್ಲಿ ಹಾಗೂ ಇತರೆ ದಾಖಲೆಗಳಲ್ಲಿ ಇರುವಂತೆಯೇ ನಿಮ್ಮ ಮೊದಲ,ಮಧ್ಯದ ಹಾಗೂ ಕೊನೆಯ ಹೆಸರನ್ನು ಅರ್ಜಿ ಸಲ್ಲಿಸುವಾಗ ಭರ್ತಿ ಮಾಡಿ. ಅರ್ಜಿಯಲ್ಲಿನ ಹೆಸರು ದಾಖಲೆಗೆ ಹೊಂದಾಣಿಕೆ ಯಾಗದಿದ್ದರೆ ನಿಮ್ಮನ್ನು ಅನರ್ಹಗೊಳಿಸಲಾಗುತ್ತದೆ.

    ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ, ಡಾಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ. ಹೀಗೆ ಮಾಡುವಾಗ ನಿಮ್ಮ ನೋಂದಣಿ ಸಂಖ್ಯೆ ಹಾಗೂ ಪಾಸ್‌ವರ್ಡ್ ಒಂದು ಕಡೆ ಬರೆದಿಟ್ಟುಕೊಳ್ಳಲು ಮರೆಯಬೇಡಿ.

    ಆನ್ಲೈನ್ ಅಪ್ಲಿಕೇಷನ್‌ನಲ್ಲಿ ನಾಲ್ಕು ವಿಭಾಗಗಳಿರುತ್ತವೆ. ಮೊದಲನೆಯದ್ದು, ಬೇಸಿಕ್ ಇನ್ನ್ಪಾರ್ಮೆಷನ್, ಎರಡನೆಯದ್ದು ಭಾವಚಿತ್ರ ಹಾಗೂ ಸಹಿ, ಮೂರನೆಯದ್ದರಲ್ಲಿ ಮೂರು ವಿಭಾಗಗಳಿದ್ದು, ಮೊದಲ ವಿಭಾಗದಲ್ಲಿ Category/Date of Birth/Address ಎರಡನೇ ವಿಭಾಗದಲ್ಲಿ ವಿದ್ಯಾರ್ಹತೆ/ ಅನುಭವ, ಮೂರನೇ ವಿಭಾಗದಲ್ಲಿ ನೀವು ಆರಿಸಿಕೊಳ್ಳುವ ಬ್ಯಾಂಕನ್ನು ಕ್ರಮವಾಗಿ ಗುರುತಿಸುವುದು ಕಡ್ಡಾಯವಾಗಿರುತ್ತದೆ. ನಿಮಗೆ ಇಷ್ಟವಾದ ಬ್ಯಾಂಕ್ ಅನ್ನು ಮೊದಲು ಗುರುತಿಸಿ, ಏಕೆಂದರೆ ಮುಂದೆ ನೇಮಕಾತಿ ಸಂದರ್ಭದಲ್ಲಿ ನೀವು ಗುರುತಿಸಿದ ಬ್ಯಾಂಕುಗಳಿಗೆ ಮೊದಲ ಆದ್ಯತೆ ನೀಡುತ್ತಾರೆ. ಹಾಗೂ ಕೊನೆಯದ್ದು ಪ್ರಿವ್ಯೂ, ಎಲ್ಲವೂ ಸರಿಯಾಗಿದ್ದರೆ final submit ಬಟನ್ ಒತ್ತಿದ ನಂತರ payment ಡೀಟೇಲ್ಸ್ ನ ಇನ್ನೊಂದು ಅಡಿಷನಲ್ ಪೇಜ್ ಡಿಸ್‌ಪ್ಲೇ ಆಗುತ್ತದೆ.

    ಆನ್‌ಲೈನ್‌ನಲ್ಲಿ ಶುಲ್ಕ ಭರಿಸಲು ಕ್ರೆಡಿಟ್ / ಡೆಬಿಟ್ ಕಾರ್ಡ್ ಅನ್ನು ಹಾಗೂ ಪಾಸ್‌ವರ್ಡ್ ಮಾಹಿತಿಯನ್ನು ಮೊದಲೇ ಸಿದ್ಧವಾಗಿಟ್ಟುಕೊಳ್ಳಿ. ನೀಡಲಾಗಿರುವ ಮಾಹಿತಿಯಂತೆ ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.

    ಆನ್‌ಲೈನ್ ಪೇಮೆಂಟ್ ಮಾಡುವಾಗ ಪೇಮೆಂಟ್ ಇನ್ವಪಾರ್ಮೇಷನ್ ತುಂಬಿದ ನಂತರ ಸರ್ವ‌ರ್ ನಿಂದ ಮಾಹಿತಿ ದೊರೆಯುವವರೆಗೆ ಕಾಯಿರಿ. ಈ ಸಂದರ್ಭದಲ್ಲಿ back ಅಥವಾ refresh ಬಟನ್ ಬಳಸಬೇಡಿ, ಒಂದು ವೇಳೆ back ಅಥವಾ refresh ಬಟನ್ ಬಳಸಿದರೆ ಗೊಂದಲವಾಗಿ ಎರಡೆರಡು ಸಲ ಶುಲ್ಕ ಪಾವತಿಯಾಗಬಹುದು.

    ಅ.) ಕೈಬರಹದ ಘೋಷಣೆಯ ಪಠ್ಯ ಹೀಗಿದೆ-“ನಾನು,_______ (ಅಭ್ಯರ್ಥಿಯ ಹೆಸರು),ಈ ಮೂಲಕ ನಾನು ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ, ನಿಜ ಮತ್ತು ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ.”

    ಬ).ಮೇಲೆ ತಿಳಿಸಿದ ಕೈ ಲಿಖಿತ ಘೋಷಣೆಯು ಅಭ್ಯರ್ಥಿಯ ಕೈ ಬರಹದಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಬೇಕು ಮತ್ತು ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಇದನ್ನು ಬೇರೆಯವರು ಅಥವಾ ಬೇರೆ ಯಾವುದೇ ಭಾಷೆಯಲ್ಲಿ ಬರೆದಿದ್ದರೆ, ಅರ್ಜಿಯನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ.

    ಕ್ಯಾಪಿಟಲ್ ಲೆಟರಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ.

    ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು.

    ಐಬಿಪಿಎಸ್ ನೋಂದಾಯಿತ ಇ-ಮೇಲ್ ಐಡಿ ಮೂಲಕ ಪರೀಕ್ಷೆ ಇತ್ಯಾದಿಗಳಿಗೆ ಕರೆ ಪತ್ರಗಳನ್ನು ಕಳುಹಿಸಬಹುದು. ಯಾವುದೇ ಸಂದರ್ಭದಲ್ಲಿ, ಅಭ್ಯರ್ಥಿಯು ಇ-ಮೇಲ್ ಐಡಿಯೊಂದಿಗೆ ಯಾವುದೇ ಇತರ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬೇಡಿ.ಒಂದು ವೇಳೆ ಅಭ್ಯರ್ಥಿಗಳು ವೈಯಕ್ತಿಕ ಇ-ಮೇಲ್ ಐಡಿ ಹೊಂದಿಲ್ಲದಿದ್ದರೆ, ಆತ/ಆಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ತನ್ನ ಹೊಸ ಇ-ಮೇಲ್ ಐಡಿಯನ್ನು ರಚಿಸಬೇಕು ಮತ್ತು ಆ ಇಮೇಲ್ ಖಾತೆಯನ್ನು ನಿರ್ವಹಿಸಬೇಕು. ಅರ್ಜಿ ಶುಲ್ಕಗಳು/ ಮಾಹಿತಿ ಶುಲ್ಕಗಳು 07.10.2021 ರಿಂದ 27.10.2021 ರವರೆಗೆ ಪಾವತಿಸಬೇಕು (ಆನ್‌ಲೈನ್ ಪಾವತಿ), ಎರಡೂ ದಿನಾಂಕಗಳನ್ನು ಒಳಗೊಂಡಂತೆ.

    NYAMATHI-ನ್ಯಾಮತಿಗೆ ಮಿನಿ ವಿಧಾನಸೌಧದ ಭರವಸೆ ನೀಡಿದ ಸಿಎಂ

    DAVANGERE OCT 16

    ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು-DEPUTY COMMISSIONERS_ ಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳ ಕಡೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-BASAVARAJA BOMMAI- ತಿಳಿಸಿದರು.ಅವರು ಇಂದು ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ- ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ವಿವಿಧ ಸೌಲಭ್ಯಗಳ ವಿತರಣೆ, ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.

    ಅಭಿವೃದ್ಧಿ ಜನರ ಸುತ್ತಲೂ ಆಗಬೇಕು. ಜನರ ಬಳಿ ಅಭಿವೃದ್ಧಿ ಹೋದಾಗ ಓಡಾಟ ನಿಂತ ಸ್ಥಿರವಾದ ಬದುಕು ಸಿಗುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

    ಮನೆ ಬಾಗಿಲಿಗೆ ಪಡಿತರ:ಜನವರಿ 26 ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದ ಮುಖ್ಯಮಂತ್ರಿಗಳು, ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನವೆಂಬರ್ 1 ರಂದು ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ ೨೮ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಸೌಲಭ್ಯಗಳನ್ನು ಮೊಬೈಲ್ ಮೂಲಕ ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

    ಪಿಂಚಣಿ ಸೌಲಭ್ಯ ಆನ್‌ಲೈನ್ ನಲ್ಲಿ ಈಗಾಗಲೇ ಲಭ್ಯವಿದೆ. ಇದು ಲಭ್ಯವಾಗುವಲ್ಲಿ ತೊಂದರೆಯಾದರೆ, ತಾಲ್ಲೂಕು ಕಚೇರಿಗೆ ಹೋಗಬೇಕಾಗಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜನರ ಸೇವೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.

    ಅಧಿಕಾರ ಹೆಪ್ಪುಗಟ್ಟಿ ವಿಧಾನಸಭೆಯಲ್ಲಿ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು. ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಚ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು ಎಂದು ತಿಳಿಸಿದರು.

    ನಮ್ಮ ಸರ್ಕಾರ ಬಡವರಿಗೆ 4 ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದ್ದು, ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ. ಜಲ್ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆಯಲ್ಲದೆ, ಅಮೃತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಸಮಗ್ರ ಅಭಿವೃದ್ಧಿಯ ಕಲ್ಪನೆಯನ್ನು ಸರ್ಕಾರ ಹೊಂದಿದ್ದು, ಉದ್ಯಮ, ಉದ್ಯೋಗಕ್ಕೆ ಸಮಾನ ಮಹತ್ವವನ್ನು ನೀಡಿದೆ. ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.

    ದಾವಣೆಗೆರೆ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ ಎಂದ ಅವರು ನ್ಯಾಮತಿಗೆ ಮಿನಿ ವಿಧಾನಸೌಧವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

    DASARA MUSIC FEST:ದಸರಾ ಸಂಗೀತ ಕಾರ್ಯಕ್ರಮದ ಸಮಾರೋಪ

    ಕನ್ನಡಪ್ರೆಸ್ .ಕಾಮ್ ನ ದಸರಾ ಸಂಗೀತೋತ್ಸವ ಇಂದು ಅಂತಿಮ ದಿನವಾಗಿದ್ದು ಎರಡು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ.

    ವಿಜಯದಶಮಿಯ ದಿನವಾದ ಇಂದು ಶ್ರೀ ಪುರಂದರದಾಸರು ರಚಿಸಿದ ಶ್ರಿೀ ಶ್ರೀನಿವಾಸ ಕಲ್ಯಾಣವನ್ನು ಅನುಸೂಯ ಅವರು ಪ್ರಸ್ತುತ ಪಡಿಸಿದ್ದಾರೆ.

    ಮತ್ತೊಂದು ಕಾರ್ಯಕ್ರಮದಲ್ಲಿ ಡಾ. ಸುಚೇತಾ ಅವರ ನೇತ್ವತ್ವದಲ್ಲಿ ಸಾರಂಗ ಸಂಗೀತ ಶಾಲೆಯ ಮಕ್ಕಳು ಕಾರ್ಯಕ್ರಮ ಪ್ರಸ್ತುತ ಪಡಿಸಿದ್ದಾರೆ.

    ಆಲಿಸಿ . ವೀಕ್ಷಿಸಿ ಹಾಗೆಯೇ ನಮ್ಮ ಚಾನಲ್ ಗೆ SUBSCRIBE ಆಗಿರಿ.

    MYSURU DASARA:ಅರಮನೆ ಆವರಣದಲ್ಲಿ ವೈಭವಯುತ ಜಂಬೂಸವಾರಿ

    MYSURU OCT 15

    ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ_mysuru Dasara- ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ-jamboo savari- ಕಾರ್ಯಕ್ರಮ ಶುಕ್ರವಾರ ಅರಮನೆ ಆವರಣದಲ್ಲಿ ಸಾಂಪ್ರದಾಯಕವಾಗಿ ಜರುಗಿತು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-basavaraja bommai- ಅವರು ಅರಮನೆಯ ಬಲರಾಮ ದ್ವಾರದ ಬಳಿ ಸಂಜೆ 4.36 ರಿಂದ 4.46 ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ನಂದಿ ಧ್ವಜಕ್ಕೆ-nandi dhwaja_ ಪೂಜೆಸಲ್ಲಿಸಿದರು. ಬಳಿಕ ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿಯಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿಯ ವಿಗ್ರಹವನ್ನು ಎರಡನೇ ಬಾರಿಗೆ ಹೊತ್ತ ಅಭಿಮನ್ಯು, ತನ್ನ ಸಂಗಾತಿಗಳಾದ ಕಾವೇರಿ ಹಾಗೂ ಚೈತ್ರ ಜೊತೆಗೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಸಂಜೆ 5.23ಕ್ಕೆ ವಿಶೇಷ ವೇದಿಕೆಗೆ ಬಂದಿತು.

    ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುತ್ತಿದ್ದಂತೆ ರಾಷ್ಟ್ರಗೀತೆ ಮೊಳಗಿತು. ಇದೇ ವೇಳೆಗೆ 52 ಸೆಕೆಂಡ್‌ಗಳಲ್ಲಿ 21 ಬಾರಿ ಕುಶಾಲತೋಪುಗಳನ್ನು ಅರಮನೆಯ ಹೊರಾವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಿಡಿಸಿದರು.

    ಬಳಿಕ ಅಂಬಾರಿ ಆನೆಯು ಪೊಲೀಸ್ ಅಶ್ವದಳ, ಕೆ‌ಎಸ್‌ಆರ್‌ಪಿ ಮೌಂಟೇನ್ ಕಂಪನಿ ಬೆಂಗಾವಲಿನಲ್ಲಿ ಸಾಗಿತು. ನೆರೆದಿದ್ದ ಜನರು ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡು ಝೇಂಕಾರ ಘೋಷಗಳನ್ನು ಕೂಗಿದರು.

    ಮೆರವಣಿಗೆಯ ಆರಂಭದಲ್ಲಿ ನಿಶಾನೆ ಆನೆ ಧನಂಜಯ ಹಾಗೂ ಗೋಪಾಲಸ್ವಾಮಿ ನಡುವೆ ಅಶ್ವತ್ಥಾಮ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಬಳಿಕ ನಾದಸ್ವರ ಮತ್ತು ಸ್ಯಾಕ್ಸೋಫೋನ್ ಕಲಾವಿದರು ಪ್ರದರ್ಶನ ನೀಡುತ್ತಾ ಸಾಗಿದರು. ನಾದಸ್ವರ, ವೀರಗಾಸೆ, ಚೆಂಡೆ ಮೇಳ, ಮರ ಗಾಲು ವೇಷ, ಚಿಲಿಪಿಲಿ ಗೊಂಬೆ ಕಲಾವಿದರು ಪ್ರದರ್ಶನ ನೀಡುತ್ತಾ ಎಲ್ಲರನ್ನು ರಂಜಿಸಿದರು.

    ಗಮನಸೆಳೆದ ಕಲಾ ತಂಡಗಳು

    ನಾದಸ್ವರ ವಿದ್ವಾನ್ ಆರ್. ನಾಗರಾಜ್ ಮತ್ತು ತಂಡ ಹಾಗೂ ಹಂಪಾಪುರ ಮಹದೇವ್ ತಂಡದಿಂದ ಸುಮಧುರವಾಗಿ ನಾದಸ್ವರ ನುಡಿಸುತ್ತಾ ಸಾಗಿದರು‌. ಮೈಸೂರಿನ ರತ್ನಮ್ಮ ತಂಡ, ಅಂಬಳೆ ಶಿವಣ್ಣ ತಂಡ, ನೀಲಕಂಠ ತಂಡ, ಆನಂದ್ ಕುಮಾರ್ ತಂಡ ಹೆಚ್.ಪಿ ರುದ್ರೇಶ್ ಹಾಗೂ ವೀರಭದ್ರೇಶ್ವರ ವೀರಗಾಸೆ ತಂಡದವರು ವೀರಗಾಸೆ ಕುಣಿತವಾಡುತ್ತ ಮುನ್ನೆಡೆದರು‌.

    ಕೆಂಪಿಸಿದ್ದನಹುಂಡಿ ಮಹದೇವು, ಚಿಕ್ಕಮರಿಯಪ್ಪ, ಕಂಸಾಳೆ ಸಿದ್ದರಾಮು ಹಾಗೂ ಕೃಷ್ಣ ಜನಮನ ಮತ್ತು ತಂಡದಿಂದ ಕಂಸಾಳೆ ಜಾನಪದ ನೃತ್ಯ ಮಾಡಿದರು. ರಮ್ಯ , ಕಿರಣ್, ಕುಮಾರ್, ಸ್ವಾಮಿನಾಯಕ ಮತ್ತು ತಂಡದವರು ಮಾಡಿದ ಡೊಳ್ಳುಕುಣಿತವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

    ಅಮೃತ ಮತ್ತು ತಂಡ, ಪಲ್ಲವಿ ಮತ್ತು ತಂಡದಿಂದ ನಗಾರಿ, ಪಲ್ಲವಿ ಹಾಗೂ ವೈ.ಬಿ ಪ್ರಕಾಶ್ ಮತ್ತು ತಂಡದಿಂದ ಪೂಜಾಕುಣಿತ ಅದ್ಭುತವಾಗಿತ್ತು. ಅಶ್ವಾರೋಹಿ ಪಡೆಯ ಪ್ರಧಾನ ಕಮಾಂಡೆಂಟ್ ಕೆಎಆರ್‌ಪಿ ಮೌಂಟೆಂಡ್ ಕಂಪನಿ ತುಕಡಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದವು.

    ಚಿತ್ತಾಕರ್ಷಕ ಸ್ತಬ್ದಚಿತ್ರಗಳು

    ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಒಟ್ಟು 6 ವರ್ಣರಂಜಿತ ಸ್ತಬ್ಧಚಿತ್ರಗಳು ಎಲ್ಲರನ್ನೂ ಆಕರ್ಷಿಸಿದವು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸ್ತಬ್ದಚಿತ್ರವು ಮೊದಲಿಗೆ ಸಾಗುವ ಮೂಲಕ ಎಲ್ಲರ ಚಿತ್ತ ನೆಟ್ಟಿತು.

    ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ‘ಬಹುವಸತಿ ಸಂಕೀರ್ಣ’, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಕೊರೊನಾ ಮುಕ್ತ ಕರ್ನಾಟಕ’ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ‘ಸಮಗ್ರ ಕೃಷಿ’, ಮತ್ತು ದಸರಾ ಉಪಸಮಿತಿಯಿಂದ ‘ಪರಿಸರ ಸಂರಕ್ಷಣೆ’, ‘ಅರಮನೆ ಆನೆಬಂಡಿ’ ಸ್ತಬ್ಧ ಚಿತ್ರಗಳು ಸಾಗಿದವು.

    ಪುಷ್ಪಾರ್ಚನೆ ವೇಳೆ ರಾಜ್ಯ ಹೃಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮೇಯರ್ ಸುನಂದ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದರು.

    ರಂಗಕರ್ಮಿ ಜಿ ಕೆ ಗೋವಿಂದರಾವ್ – G K GOVINDA RAO- ನಿಧನ

    HUBBALLI OCT 15

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ಹುಬ್ಬಳ್ಳಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನರಾದರು.

    ಬೆಂಗಳೂರಿನಲ್ಲಿದ್ದ ಅವರು ಆರೋಗ್ಯ ಬಿಗಡಾಯಿಸಿದ್ದ ಕಾರಣ ಹುಬ್ಬಳ್ಳಿಯ ಪುತ್ರಿಯ ಮನೆಗೆ ತೆರಳಿದ್ದರು. ಎರಡು ತಿಂಗಳಿಂದ ಅಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.

    ಪುತ್ರಿ  ಶ್ಯಾಮಲಾ ಗುರುಪ್ರಸಾದ್ ಮನೆಯಲ್ಲಿ ಉಳಿದುಕೊಂಡಿದ್ಧಅವರಿಗೆ ಅಳಿಯ ಹುಬ್ಬಳ್ಳಿಯ ಖ್ಯಾತ ನೇತ್ರ ತಜ್ಞ ವೈದ್ಯ ಡಾ. ಗುರು ಪ್ರಸಾದ್ -DR GURU PRASAD_ ಚಿಕಿತ್ಸೆ ಕೊಡಿಸುತ್ತಿದ್ದರು. ಕೇಶ್ವಾಪುರದ ಮುಕ್ತಿದಾಮದಲ್ಲಿ ಬೆಳಿಗ್ಗೆಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

    ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.

    ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೋವಿಂದರಾವ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

    error: Content is protected !!